ಬೆಂಗಳೂರು: ನಗರದ ಜಂಟಿ ಟ್ರಾಫಿಕ್ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿವೆ. ಇದಕ್ಕೆ ಮನೆ ಕೆಲಸದಾಕೆ ಕಾರಣ ಎಂದು ಆರೋಪಿಸಿ ಸಂಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಮಾಡೆಲಿಂಗ್ ಕ್ಷೇತ್ರಕ್ಕೆ ಅಡಿಯಿಟ್ಟ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ
ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆಯಾಗಿದ್ದು, ಮನೆಯಲ್ಲಿ ಕೆಲವು ವಸ್ತುಗಳು ಕಾಣಿಸುತ್ತಿಲ್ಲ. ಈ ನಿಟ್ಟಿನಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಯುಕ್ತರ ಮನೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿ ದೂರು ನೀಡಿದ್ದು, ಈ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
(ಇದನ್ನೂ ಓದಿ: ಬೆಂಗಳೂರಿನಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಯುವಕರು ಅರೆಸ್ಟ್.. ಸೂಕ್ತ ಕ್ರಮಕ್ಕೆ ಗೃಹ ಸಚಿವರ ಸೂಚನೆ)