ETV Bharat / city

ಬೆಂಗಳೂರಿನ ಕಂಟೇನ್ಮೆಂಟ್​ ವಲಯದಲ್ಲಿ 5.3 ಲಕ್ಷ ಕುಟುಂಬಗಳಿವೆ.. ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ - bangalore latest news

15,642 ಮನೆಗಳಲ್ಲಿ ಹಿರಿಯ ನಾಗರಿಕರಿದ್ದಾರೆ.‌ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ 5,536 ಮನೆಗಳಿವೆ..

There are 5.3 lakh families in Bangalore's containment zone
ಬೆಂಗಳೂರಿನ ಕಂಟೇನ್ಮೆಂಟ್​ ವಲಯದಲ್ಲಿ 5.3 ಲಕ್ಷ ಕುಟುಂಬಗಳಿವೆ: ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ
author img

By

Published : Jul 24, 2020, 9:14 PM IST

ಬೆಂಗಳೂರು : ನಗರದ ಕಂಟೇನ್ಮೆಂಟ್​ ವಲಯಗಳಲ್ಲಿ ಒಟ್ಟು 5.3 ಲಕ್ಷ ಕುಟುಂಬ ವಾಸ ಮಾಡುತ್ತಿವೆ ಎಂದು ಬಿಬಿಎಂಪಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಕಂಟೇನ್ಮೆಂಟ್​ ವಲಯಗಳಲ್ಲಿ ವಾಸ ಮಾಡುತ್ತಿರುವ ಜನರಿಗೆ ಆಹಾರ ‌ಪೂರೈಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ, ಬಿಬಿಎಂಪಿ ಪರ ವಕೀಲರು ಈ ಲಿಖಿತ ಮಾಹಿತಿ ಸಲ್ಲಿಸಿದರು. ನಗರದಲ್ಲಿ 9,962 ಸಕ್ರಿಯ ಕಂಟೇನ್ಮೆಂಟ್​ ವಲಯಗಳಿವೆ.

ಅವುಗಳಲ್ಲಿ 5.3 ಲಕ್ಷ ಕುಟುಂಬಗಳು ವಾಸ ಮಾಡುತ್ತಿವೆ. 15,642 ಮನೆಗಳಲ್ಲಿ ಹಿರಿಯ ನಾಗರಿಕರಿದ್ದಾರೆ.‌ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ 5,536 ಮನೆಗಳಿವೆ ಎಂದು ಬಿಬಿಎಂಪಿ ಹೈಕೋರ್ಟ್​ಗೆ ತಿಳಿಸಿದೆ.

ಅಲ್ಲದೆ, ಕಂಟೇನ್ಮೆಂಟ್ ವಲಯಗಳಲ್ಲಿ ಎಲ್ಲ ಕುಟುಂಬಗಳಿಗೆ ಆಹಾರ ಒದಗಿಸುವುದು ಪಾಲಿಕೆಯ ಕರ್ತವ್ಯವಾಗಿದೆ.‌ ಅದಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಒಟ್ಟು 53,000 ಆಹಾರದ ಕಿಟ್ ಅಗತ್ಯವಿದೆ. ಈಗಾಗಲೇ 8 ಸಾವಿರ ಕಿಟ್​ಗಳನ್ನು ವಿತರಿಸಲಾಗಿದೆ. ಉಳಿದವರಿಗೆ ಕಿಟ್ ವಿತರಣೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಭರವಸೆ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.