ETV Bharat / city

ಅನರ್ಹ‌ ಶಾಸಕರ ವಿಚಾರ: ಯೂಟರ್ನ್ ಹೊಡೆದ ಡಿಸಿಎಂ ಲಕ್ಷ್ಮಣ ಸವದಿ - ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆಂಗಳೂರು ಸುದ್ದಿಗೋಷ್ಟಿ

ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧವಿಲ್ಲ ಎನ್ನುತ್ತಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಅನರ್ಹರನ್ನು ಸ್ವಾಗತಿಸುತ್ತೇವೆ ಎಂದು ಹೇಳಿ ಅಚ್ಚರಿ ಹುಟ್ಟಿಸಿದ್ದಾರೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬೆಂಗಳೂರು ಸುದ್ದಿಗೋಷ್ಟಿ
author img

By

Published : Nov 7, 2019, 6:09 PM IST

ಬೆಂಗಳೂರು: ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧವಿಲ್ಲ ಎನ್ನುತ್ತಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇದೀಗ ಅನರ್ಹರನ್ನು ಸ್ವಾಗತಿಸುತ್ತೇವೆ ಎಂದು ಹೇಳಿ ಅಚ್ಚರಿ ಹುಟ್ಟಿಸಿದ್ದಾರೆ.

ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷ ಏನು ಹೇಳುತ್ತದೆಯೋ ಅದರಂತೆಯೇ ನಡೆದುಕೊಳ್ಳುತ್ತೇನೆ. ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಸ್ಫರ್ಧೆಗೂ ಸಿದ್ಧನಿದ್ದೇನೆ. ಆದರೆ ಎಲ್ಲವೂ ವರಿಷ್ಠರ ನಿರ್ಧಾರಕ್ಕೆ ಬಿಟ್ಟಿರುವಂಥದ್ದು ಎಂದರು.

ಅನರ್ಹ ಶಾಸಕರ ಬಗ್ಗೆ ನಮ್ಮ ತಕರಾರಿಲ್ಲ, ಗೊಂದಲವೂ ಇಲ್ಲ. ಅವರ ವಿಚಾರ ಈಗಾಗಲೇ ಕೋರ್ಟ್‌ನಲ್ಲಿದೆ. ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೆ ಸ್ವಾಗತಿಸುತ್ತೇವೆ. ಅವರ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ವರಿಷ್ಠರು ಸ್ಪಂದಿಸುತ್ತಾರೆ. ಹೈಕಮಾಂಡ್ ನಿರ್ಧಾರವನ್ನು ನಾವೆಲ್ಲಾ ಪಾಲನೆ ಮಾಡುತ್ತೇವೆ ಎಂದು ಸ್ಪಷ್ಟನೆ ಕೊಟ್ಟರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಜೊತೆ ನಾನು ಈಗಾಗಲೇ ಮಾತಾಡಿದ್ದೇನೆ. ಅವರು ಅಂತಹ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎನ್ನುವ ಆಸೆ ಸಹಜ, ಆದರೂ ಅವರು ಆತುರದ ನಿರ್ಧಾರ ಮಾಡುವುದಿಲ್ಲ ಎಂದು ತಿಳಿಸಿದ್ರು.

Intro:

ಬೆಂಗಳೂರು: ಅನರ್ಹ ಶಾಸಕರಿಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುವ ಹೇಳಿಕೆ ನೀಡುತ್ತಿದ್ದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ಅನರ್ಹರನ್ನು ಸ್ವಾಗತಿಸುವ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತ‌ನಾಡಿದ ಅವರು,ನಾನು ಪಕ್ಷದ ಶಿಸ್ತಿನ ಸಿಪಾಯಿ ಪಕ್ಷ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಲ್ಲಿ ಸ್ಫರ್ಧೆಗೂ ಸಿದ್ಧ ಇದ್ದೇನೆ ಆದರೆ ಎಲ್ಲವೂ ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದಾಗಿದೆ ಎಂದರು.

ಅನರ್ಹ ಶಾಸಕರ ಬಗ್ಗೆ ನಮ್ಮ ತಕರಾರು ಇಲ್ಲ,ಗೊಂದಲವೂ ಇಲ್ಲ. ಅವರ ವಿಚಾರ ಈಗಾಗಲೇ ಕೋರ್ಟ್ ನಲ್ಲಿದೆ ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೆ ಸ್ವಾಗತ ಮಾಡುತ್ತೇವೆ
ಅವರ ಬೇಡಿಕೆಗಳಿಗೆ ಸಂಬಂಧಪಟ್ಟಂತೆ ವರಿಷ್ಠರು ಸ್ಪಂದಿಸುತ್ತಾರೆ. ಹೈಕಮಾಂಡ್ ನಿರ್ಧಾರವನ್ನು ನಾವೆಲ್ಲಾ ಪಾಲನೆ ಮಾಡುತ್ತೇವೆ ಎಂದರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದ ಕಾಗವಾಡ ಕ್ಷೇತ್ರದ ಮಾಜಿ ಶಾಸಕ
ರಾಜುಕಾಗೆ ಜೊತೆ ನಾನು ಈಗಾಗಲೇ ಮಾತಾಡಿದ್ದೇನೆ ಅವರು ಅಂತಹ ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ.ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎನ್ನುವ ಆಸೆ ಸಹಜ ಆದರೂ ಅವರು ಅಂತಹ ಆತುರದ ನಿರ್ಧಾರ ಮಾಡುವುದಿಲ್ಲ ಎಂದರು.

Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.