ಬೆಂಗಳೂರು: ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ತೆರವಾದ ಸಚಿವ ಸ್ಥಾನವನ್ನು ನನಗೆ ಕೊಡುವ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಸಿಎಂ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಸಿಎಂ ಯಡಿಯೂರಪ್ಪ ರಾಜಭವನಕ್ಕೆ ಕಳುಹಿಸಿದ್ದಾರೆ. ಸದ್ಯದಲ್ಲೇ ರಾಜೀನಾಮೆ ಅಂಗೀಕಾರವಾಗಲಿದೆ ಎಂದರು.
ಸಿಡಿ ಆರೋಪ ಪ್ರಕರಣದ ಬಗ್ಗೆ ತನಿಖೆಗೆ ಒತ್ತಾಯಿಸಿದ್ದೇವೆ, ತನಿಖೆಯಲ್ಲಿ ಎಲ್ಲವೂ ಬಹಿರಂಗವಾಗಲಿದೆ. ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲೇ ಇದ್ದಾರೆ. ಅವರು ಎಲ್ಲೂ ಹೋಗಲ್ಲ, ಇಂದು ಸಂಜೆ ಇಲ್ಲವೇ ನಾಳೆ ಅವರು ಮಾಧ್ಯಮಗಳಿಗೆ ಎಲ್ಲ ವಿವರ ನೀಡಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ.. ರೈಲ್ವೆ ಹಳಿ ದಾಟಲು ಹೋಗಿ ಪ್ರಾಣ ಕಳೆದುಕೊಂಡ ವ್ಯಕ್ತಿ... ಸಿಸಿಟಿವಿಯಲ್ಲಿ ಭೀಕರ ದೃಶ್ಯ!
ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗುವ ಸಚಿವ ಸ್ಥಾನವನ್ನು ಜಾರಕಿಹೊಳಿ ಕುಟುಂಬಕ್ಕೇ ನೀಡಬೇಕು ಎನ್ನುವ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ನನಗೆ ಸಚಿವ ಸ್ಥಾನ ನೀಡುವ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಅದೆಲ್ಲಾ ಮುಂದೆ ನೋಡೋಣ ಎನ್ನುತ್ತಾ ನಿರ್ಗಮಿಸಿದರು.