ಬೆಂಗಳೂರು: ನಾನು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇನೆ ಎಂದು ಖಾಸಗಿ ವೆಬ್‌ಸೈಟ್ ಒಂದು ಸುದ್ದಿ ಮಾಡಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಂತಹ ಅಗತ್ಯವೂ ನನಗಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
-
ನಾನು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇನೆ ಎಂದು ಖಾಸಗಿ ವೆಬ್ ಸೈಟ್ ಒಂದು ಸುದ್ದಿ ಮಾಡಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಂತಹ ಅಗತ್ಯವೂ ನನಗಿಲ್ಲ.
— Murugesh R Nirani (MRN) (@NiraniMurugesh) July 18, 2021 " class="align-text-top noRightClick twitterSection" data="
(1/5)
">ನಾನು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇನೆ ಎಂದು ಖಾಸಗಿ ವೆಬ್ ಸೈಟ್ ಒಂದು ಸುದ್ದಿ ಮಾಡಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಂತಹ ಅಗತ್ಯವೂ ನನಗಿಲ್ಲ.
— Murugesh R Nirani (MRN) (@NiraniMurugesh) July 18, 2021
(1/5)ನಾನು ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇನೆ ಎಂದು ಖಾಸಗಿ ವೆಬ್ ಸೈಟ್ ಒಂದು ಸುದ್ದಿ ಮಾಡಿರುವುದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಅಂತಹ ಅಗತ್ಯವೂ ನನಗಿಲ್ಲ.
— Murugesh R Nirani (MRN) (@NiraniMurugesh) July 18, 2021
(1/5)
ಈ ಕುರಿತು ಟ್ಟೀಟ್ ಮಾಡಿರುವ ಅವರು, ಕೆಲವು ಕುಚೋದ್ಯದ ಸಂಗತಿಗಳನ್ನು ಮುಂದಿಟ್ಟುಕೊಂಡು ನಾನು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇನೆ ಎಂದು ಕೆಲವರು ಹಸಿಬಿಸಿ ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ. ಅದು ನನ್ನ ಮನಸ್ಸಿಗೆ ಅತ್ಯಂತ ನೋವು ತಂದಿದೆ. 2020ರಲ್ಲಿ ಪ್ರಕರಣವೊಂದರ ಸಂಬಂಧ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದನ್ನು ಈಗ ಏಕೆ ಪ್ರಸ್ತಾಪಿಸುತ್ತಿದ್ದಾರೆ ಎಂಬ ಹುನ್ನಾರವೂ ನನಗೆ ಅರ್ಥವಾಗುತ್ತಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ.
ಕಳೆದ ಮೂರು ದಶಕಕ್ಕೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿರುವ ನನ್ನ ಮೇಲೆ ಆಗಾಗ್ಗೆ ಇಂತಹ ಆಧಾರರಹಿತ ಆರೋಪಗಳನ್ನು ಕೆಲವು ಕಾಣದ ಕೈಗಳು ಮಾಡುತ್ತಲೇ ಬಂದಿದ್ದರೂ ನಾನು ಎದೆಗುಂದಿಲ್ಲ. ಸಾರ್ವಜನಿಕ ಜೀವನದಲ್ಲಿದ್ದಾಗ ಕೆಲವು ಸಂದರ್ಭಗಳಲ್ಲಿ ಇಂತಹ ವದಂತಿಗಳನ್ನು ಹಬ್ಬುವುದು ಸರ್ವೇಸಾಮಾನ್ಯ. ನನ್ನ ಹಿತೈಷಿಗಳು ಹಾಗೂ ನನ್ನನ್ನು ಇಷ್ಟು ಎತ್ತರಕ್ಕೆ ಬೆಳೆಸಿದ ಕಾರ್ಯಕರ್ತರು ಧೃತಿಗೆಡಬಾರದೆಂದು ಸಚಿವರು ಮನವಿ ಮಾಡಿದ್ದಾರೆ.