ETV Bharat / city

ಅವಧಿ ಪೂರ್ವ ಚುನಾವಣೆ ಇಲ್ಲ, 150 ಸ್ಥಾನದ ಗುರಿ ಮುಟ್ಟಲು ಅಮಿತ್ ಶಾ ಮಾರ್ಗದರ್ಶನ: ಕಟೀಲ್ - ಅವಧಿಪೂರ್ವ ಚುನಾವಣೆ ಇಲ್ಲ

ಅಮಿತ್​ ಶಾ ಮುಂದಿನ ಚುನಾವಣೆಯ ಕುರಿತಾಗಿ ಕೋರ್ ಕಮಿಟಿ ಸಭೆ ನಡೆಸಿ 150 ಸ್ಥಾನಗಳ ಗುರಿಯನ್ನು ಹಾಕಿದ್ದಾರೆ. ಚುನಾವಣೆಗೆ ಅಗತ್ಯವಾದ ಸಂಘಟನಾತ್ಮಕ ಕಾರ್ಯಗಳ ಬಗ್ಗೆ ಅಗತ್ಯ ಸಲಹೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

There is no pre-election polls
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
author img

By

Published : Apr 1, 2022, 10:21 PM IST

ಬೆಂಗಳೂರು: ಅವಧಿ ಪೂರ್ವ ಚುನಾವಣೆಯ ಯಾವುದೇ ಚರ್ಚೆ ಆಗಿಲ್ಲ, ಮುಂದಿನ ವರ್ಷವೇ ಚುನಾವಣೆ ನಡೆಯಲಿದೆ. 150ರ ಗುರಿಯ ಕಾರ್ಯಯೋಜನೆ ಅನುಷ್ಠಾನಕ್ಕೆ ಅಮಿತ್ ಶಾ ಮಾರ್ಗದರ್ಶನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಕೋರ್ ಕಮಿಟಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಮುಂದಿನ ಚುನಾವಣೆಯ ಪೂರ್ವ ತಯಾರಿಗಳು ಸಂಘಟನಾತ್ಮಕ ಕಾರ್ಯಗಳ ಬಗ್ಗೆ ಚರ್ಚೆ ಆಗಿದೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಗುರಿ ಇರಿಸಿಕೊಂಡು ಅದಕ್ಕೆ ಬೇಕಾದ ಕಾರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೇಕಾದ ಮಾರ್ಗದರ್ಶನ ಮಾಡಿದ್ದಾರೆ ಎಂದರು.

ಅವಧಿಪೂರ್ವ ಚುನಾವಣೆ ಇಲ್ಲ, 150 ಸ್ಥಾನದ ಗುರಿ ಮುಟ್ಟಲು ಅಮಿತ್ ಶಾ ಮಾರ್ಗದರ್ಶನ: ಕಟೀಲ್

ಅವಧಿಪೂರ್ವ ಚುನಾವಣೆ ಇಲ್ಲ: ಯಾವುದೇ ರೀತಿಯ ಅವಧಿಪೂರ್ವ ಚುನಾವಣೆ ತಯಾರಿ ಕುರಿತು ಇಂದಿನ ಸಭೆಯಲ್ಲಿ ಚರ್ಚೆಗಳು ಆಗಿಲ್ಲ. ಅಂತಹ ಪ್ರಸ್ತಾಪವೂ ಇಲ್ಲ. ಕೇವಲ ಸಂಘಟನಾತ್ಮಕವಾಗಿ ಚರ್ಚೆ ನಡೆದಿದೆ. ಇದರ ಜೊತೆ ಜೊತೆಯಲ್ಲಿ ಮುಂದಿನ ಚುನಾವಣೆಯ ಬಗ್ಗೆಯೂ ಚರ್ಚೆ ಆಗಿದೆ ಎಂದರು.

ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಇಲ್ಲ: ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ರೀತಿಯ ಯಾವುದೇ ಚರ್ಚೆ ನಡೆದಿಲ್ಲ. ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ಅವರು ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

16ರಂದು ಕಾರ್ಯಕಾರಣಿ: ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆಯಾಗಿದೆ. 16 ರಂದು ರಾಜ್ಯ ಕಾರ್ಯಕಾರಣಿ ನಡೆಯಲಿದೆ ನಮ್ಮ ರಾಷ್ಟ್ರೀಯ ಅಧ್ಯಕ್ಷರು ಬರುತ್ತಾರೆ ಮುಂದಿನ ಮಾರ್ಗದರ್ಶನ ನೀಡಲಿದ್ದಾರೆ. ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಸಿದ್ದರಾಗಿ ಎಂದಿಲ್ಲ. ಮುಂದಿನ ವರ್ಷ ಚುನಾವಣೆ ನಡೆಯಲಿದೆ ಅದಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ ಎಂದರು.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ದ್ವೇಷಪೂರಿತ ಹೇಳಿಕೆ: ಬಿಜೆಪಿ ಶಾಸಕರು, ಸಂಸದರ ವಿರುದ್ಧ ಕ್ರಮ ಕೋರಿ ಅರ್ಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.