ETV Bharat / city

ಬಿಜೆಪಿ ಸರ್ಕಾರದ ಮೊದಲ ಅಧಿವೇಶನ: ಹೋರಾಟಕ್ಕೆ ಜೆಡಿಎಸ್​​​ ಸಿದ್ಧತೆ - ಪ್ರತಿಪಕ್ಷಗಳ ಪ್ರತಿಭಟನೆ

ಇದೇ 10ರಿಂದ ಮೂರು ದಿನಗಳ ಕಾಲ ಆರಂಭವಾಗಲಿರುವ ಅಧಿವೇಶನದಲ್ಲಿ ನೆರೆ ಪರಿಹಾರ ನೀಡಲು ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಜೆಡಿಎಸ್​-ಕಾಂಗ್ರೆಸ್ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ.

this-is-the-first-bjp-session
author img

By

Published : Oct 8, 2019, 4:40 PM IST

ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಕಲಾಪ ಅಕ್ಟೋಬರ್ 10ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲು ಜೆಡಿಎಸ್ ನಿರ್ಧರಿಸಿದೆ.

ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿ, ಅತಿವೃಷ್ಟಿ, ಬರ ಪರಿಸ್ಥಿತಿ ಹಾಗೂ ಕೇಂದ್ರದಿಂದ ಪರಿಹಾರ ತರಲು ವಿಫಲವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದು, ಹೋರಾಟದ ರೂಪುರೇಷಗಳ ಬಗ್ಗೆ ಚರ್ಚಿಸಲು ನಾಳೆ (ಬುಧವಾರ) ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಸಭೆ ಕರೆಯುವ ಸಾಧ್ಯತೆ ಇದೆ.

ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಈಗಾಗಲೇ ಮಾಹಿತಿ ನೀಡಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಅ. 10ರಂದು ಮೌರ್ಯ ವೃತ್ತದಿಂದ ಸ್ವಾತಂತ್ರ್ಯ ಉದ್ಯಾನದವರಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದಾರೆ. ಸದನದ ಒಳಗೆ ಪಕ್ಷದ ಶಾಸಕರು, ಹೊರಗೆ ಮಾಜಿ ಶಾಸಕರು, ಕಾರ್ಯಕರ್ತರು ಹೋರಾಟ ನಡೆಸಲಿದ್ದಾರೆ ಎಂದು ಗೌಡರು ತಿಳಿಸಿದ್ದಾರೆ.

ಜೆಡಿಎಸ್​ ವರಿಷ್ಠ ಹೆಚ್​.ಡಿ.ದೇವೇಗೌಡ

ಅಧಿವೇಶನದಲ್ಲಿ ನೆರೆ-ಬರ, ರೈತರ ಸಾಲಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಅನುಷ್ಠಾನ ಸೇರಿದಂತೆ ಮತ್ತಿತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮೂರು ದಿನಗಳು (ಅ. 10 -12ರವರೆಗೆ) ಸಾಲುವುದಿಲ್ಲ. ಅಧಿವೇಶನದ ಅವಧಿಯನ್ನು ವಿಸ್ತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಈ ಅಧಿವೇಶನದಲ್ಲಿ ಬಜೆಟ್ ಅನುಮೋದನೆ ಪಡೆಯಬೇಕಾಗಿದೆ. ಬೆಳಗಾವಿಯಲ್ಲಿ ನಡೆಸಬೇಕಾಗಿದ್ದ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲಾಗುತ್ತಿದೆ. ಕೇವಲ ಮೂರು ದಿನ ಅಧಿವೇಶನ ನಡೆಸಿ ಬಜೆಟ್​ಗೂ ಒಪ್ಪಿಗೆ ಪಡೆಯುವುದು ಸರಿಯಲ್ಲ. ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆಯಾಗಿಲ್ಲ. ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆಸಿ ಸರ್ಕಾರದಿಂದ ಉತ್ತರ ಪಡೆಯಬೇಕಿದೆ. ಹೀಗಾಗಿ ಕನಿಷ್ಠ ವಾರ ವಿಸ್ತರಿಸಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಒತ್ತಾಯಿಸಿವೆ.

ನೆರೆ ಪೀಡಿತ ಪ್ರದೇಶಗಳಲ್ಲಿ ಸಮರ್ಪಕ ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ಈಗಾಗಲೇ ಪ್ರತಿಪಕ್ಷಗಳು ಪ್ರತಿಭಟಿಸಿ ಸರ್ಕಾರದ ಗಮನ ಸೆಳೆದಿವೆ. ಇದೇ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ನಡೆಸಿವೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಕೂಡ ಕನಿಷ್ಠ ಎರಡು ವಾರಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರವನ್ನು ಕೋರಿದ್ದರು.

ವಿಧಾನ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸದನದ ಕಾರ್ಯ-ಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಸಭಾನಾಯಕರು, ಪ್ರತಿಪಕ್ಷಗಳ ನಾಯಕರು ಭಾಗವಹಿಸಲಿದ್ದು, ಆಗ ಅಧಿವೇಶನ ನಿಗದಿಯಂತೆ ನಡೆಸುವುದು, ಇಲ್ಲವೆ ಅವಧಿ ವಿಸ್ತರಿಸುವ ಕುರಿತು ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Intro:ಬೆಂಗಳೂರು : ರಾಜ್ಯ ವಿಧಾನಮಂಡಲ ಉಭಯ ಸದನಗಳ ಕಲಾಪ ಅಕ್ಟೋಬರ್ 10 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ನಡೆಸಲು ಜೆಡಿಎಸ್ ನಿರ್ಧರಿಸಿದೆ. Body:ರಾಜ್ಯದಲ್ಲಿ ಉಂಟಾಗಿರುವ ನೆರೆ ಹಾವಳಿ, ಅತಿವೃಷ್ಟಿ, ಬರ ಪರಿಸ್ಥಿತಿ ಹಾಗೂ ಕೇಂದ್ರದಿಂದ ಪರಿಹಾರ ತರಲು ವಿಫಲವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಜೆಡಿಎಸ್ ನಾಯಕರು ತೀರ್ಮಾನಿಸಿದ್ದು, ಹೋರಾಟದ ರೂಪು ರೇಷಗಳ ಬಗ್ಗೆ ಚರ್ಚಿಸಲು ನಾಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕಾಂಗ ಸಭೆ ಕರೆಯುವ ಸಾಧ್ಯತೆ ಇದೆ.
ಸದನದಲ್ಲಿ ಯಾವ ರೀತಿ ಹೋರಾಟ ನಡೆಸಬೇಕು ಮತ್ತು ಅದರ ರೂಪು ರೇಷ ಹೇಗಿರಬೇಕೆಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ.
ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವ ಬಗ್ಗೆ ಈಗಾಗಲೇ ಮಾಹಿತಿ ನೀಡಿರುವ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು, ಅ.10 ರಂದು ಮೌರ್ಯ ವೃತ್ತದಿಂದ ಪ್ರೀಡಂ ಪಾರ್ಕ್ ವರಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಿದ್ದಾರೆ.
ಸದನದ ಒಳಗೆ ತಮ್ಮ ಪಕ್ಷದ ಶಾಸಕರು ಹೋರಾಟ ಮಾಡುತ್ತಾರೆ. ಹೊರಗೆ ಪಕ್ಷದ ಕಾರ್ಯಕರ್ತರು, ಮಾಜಿ ಶಾಸಕರು ಸರ್ಕಾರದ ವಿಫಲತೆ ಕುರಿತು ಪ್ರತಿಭಟನೆ ನಡೆಸಲಿದ್ದಾರೆ ಎಂದು ಗೌಡರು ತಿಳಿಸಿದ್ದಾರೆ.
ಮೂರು ದಿನಗಳ ಅಧಿವೇಶನ ಏನೇನೂ ಸಾಲುವುದಿಲ್ಲ. ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡಿ ನೆರೆ-ಬರ, ರೈತರ ಸಾಲಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಅನುಷ್ಠಾನ ಮೊದಲಾದ ವಿಷಯಗಳನ್ನು ಸಮಗ್ರವಾಗಿ ಚರ್ಚೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದಾರೆ.
ಇನ್ನು ಅಧಿವೇಶನ ಅವಧಿಯನ್ನು ವಿಸ್ತರಣೆ ಮಾಡುವಂತೆ ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ. ಅ.10 ರಿಂದ 12ರ ವರೆಗೆ ಮೂರು ದಿನಗಳ ಕಾಲ ಉಭನ ಸದನಗಳ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ಬಜೆಟ್ ಅನುಮೋದನೆ ಪಡೆಯಬೇಕಾಗಿದೆ. ಬೆಳಗಾವಿಯಲ್ಲಿ ನಡೆಸಬೇಕಾಗಿದ್ದ ಚಳಿಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದೆ. ಕೇವಲ ಮೂರು ದಿನ ಅಧಿವೇಶನ ನಡೆಸಿ ಬಜೆಟ್ಗೆ ಒಪ್ಪಿಗೆ ಪಡೆಯುವುದು ಸರಿಯಲ್ಲ. ಹೀಗಾಗಿ ಕನಿಷ್ಟ ಇನ್ನೊಂದು ವಾರ ಕಾಲ ಅಧಿವೇಶನ ವಿಸ್ತರಣೆ ಮಾಡಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಈಗಾಗಲೇ ಒತ್ತಾಯಿಸಿವೆ.
ಪ್ರಸಕ್ತ ಸಾಲಿನ ಆಯವ್ಯಯದ ಬಗ್ಗೆ ಸದನದಲ್ಲಿ ಸುದೀರ್ಘ ಚರ್ಚೆಯಾಗಿಲ್ಲ. ಇಲಾಖಾವಾರು ಬೇಡಿಕೆಗಳ ಮೇಲೆ ಚರ್ಚೆ ನಡೆಸಿ ಸರ್ಕಾರದಿಂದ ಉತ್ತರ ಪಡೆಯಬೇಕಿದೆ. ಇದಕ್ಕೆ ಮೂರು ದಿನಗಳ ಕಾಲ ಸಾಕಾಗುವುದಿಲ್ಲ ಎಂದು ಉಭಯ ಪಕ್ಷಗಳು ಆಗ್ರಹಿಸಿವೆ.
ನೆರೆ ಹಾವಳಿ ಪೀಡಿತ ಪ್ರದೇಶಗಳಲ್ಲಿ ಸಮರ್ಪಕ ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ಈಗಾಗಲೇ ಪ್ರತಿಭಟನೆ ಮಾಡಿ ಸರ್ಕಾರದ ಗಮನವನ್ನು ಪ್ರತಿಪಕ್ಷಗಳು ಸೆಳೆದಿವೆ. ಇದೇ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ ನಡೆಸಿವೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಕೂಡ ಕನಿಷ್ಟ ಎರಡು ವಾರಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರವನ್ನು ಕೋರಿದ್ದರು.
ಅಧಿವೇಶನದ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸದನದ ಕಾರ್ಯ-ಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಸಭಾನಾಯಕರು, ಪ್ರತಿಪಕ್ಷಗಳ ನಾಯಕರು ಭಾಗವಹಿಸಲಿದ್ದು, ಆಗ ಅಧಿವೇಶನ ನಿಗದಿಯಂತೆ ನಡೆಸುವುದು, ಇಲ್ಲವೆ ಅಧಿವೇಶನದ ಅವಧಿಯನ್ನು ವಿಸ್ತರಣೆ ಮಾಡುವ ಕುರಿತು ಚರ್ಚಿಸುವ ಸಾಧ್ಯತೆಗಳೂ ಇವೆ ಎಂದು ಹೇಳಲಾಗುತ್ತಿದೆ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.