ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ 5 ಸಾವಿರ ಶಿಕ್ಷಕರ ನೇಮಕ ಮಾಡಲು ಕ್ರಮ ವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.
-
ಪ್ರಸಕ್ತ ವರ್ಷದಲ್ಲಿಯೇ 5 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ @BSBommai ರವರು ತಿಳಿಸಿದ್ದಾರೆ.#TeachersDay2021
— CM of Karnataka (@CMofKarnataka) September 5, 2021 " class="align-text-top noRightClick twitterSection" data="
">ಪ್ರಸಕ್ತ ವರ್ಷದಲ್ಲಿಯೇ 5 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ @BSBommai ರವರು ತಿಳಿಸಿದ್ದಾರೆ.#TeachersDay2021
— CM of Karnataka (@CMofKarnataka) September 5, 2021ಪ್ರಸಕ್ತ ವರ್ಷದಲ್ಲಿಯೇ 5 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ @BSBommai ರವರು ತಿಳಿಸಿದ್ದಾರೆ.#TeachersDay2021
— CM of Karnataka (@CMofKarnataka) September 5, 2021
ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಐದು ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಸ್ತಾಪಿಸಿದ್ದರು. ಈ ಸಂಬಂಧ ಸಿಎಂ ಜೊತೆ ಮಾತನಾಡಿದ್ದೇನೆ ಎಂದು ತಮ್ಮ ಭಾಷಣದ ವೇಳೆ ಉಲ್ಲೇಖಿಸಿದ್ದರು.
ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸುತ್ತಾ, ಪ್ರಸಕ್ತ ವರ್ಷದಲ್ಲಿ 5 ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ಹೇಳಿದರು.