ಬೆಂಗಳೂರು : ಸಿಎಂ ಯಡಿಯೂರಪ್ಪನವರಿಗೆ ಕೊರೊನಾ ಸೋಂಕು ತಗುಲಿದೆ. ಹಾಗಾಗಿ, ಕೆಲ ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಜ್ವರದ ಹಿನ್ನೆಲೆ ಇಂದು ತಪಾಸಣೆಗೊಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ನಲ್ಲಿದ್ದಾರೆ. ಜತೆಗೆ ಅವರೆಲ್ಲ ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಕಳೆದ ಎರಡು ದಿನ ಸಿಎಂ ಯಡಿಯೂರಪ್ಪ ಬೆಳಗಾವಿ ಪ್ರವಾಸ ಮಾಡಿದ್ದರು. ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಸಿಎಂ ಜೊತೆ ವೇದಿಕೆ ಹಂಚಿಕೊಂಡ ನಾಯಕರು, ಆಪ್ತ ಸಹಾಯಕರು, ಭದ್ರತಾ ಸಿಬ್ಬಂದಿ, ಕಾರು ಚಾಲಕ, ಸಂಪರ್ಕದಲ್ಲಿದ್ದ ಅಧಿಕಾರಿಗಳು ಇದೀಗ ಕೋವಿಡ್ ಆತಂಕಕ್ಕೆ ಸಿಲುಕಿದ್ದಾರೆ.
ಇದನ್ನೂ ಓದಿ.. ರಾಜ್ಯದ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಏ.20 ರವರೆಗೂ ವಿಸ್ತರಣೆ: ಸರ್ಕಾರದ ಪ್ರಮುಖ ನಿರ್ಣಯಗಳು ಹೀಗಿವೆ..