ETV Bharat / city

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮಹಿಳೆಯರ ರಕ್ಷಣೆ, ಮೂವರ ಬಂಧನ! - ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್​

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿರುವ ​ವಿದ್ಯಾರಣ್ಯಪುರ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

three arrested under prostitution case in bangalore
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್​
author img

By

Published : Mar 10, 2022, 11:01 AM IST

ಯಲಹಂಕ (ಬೆಂಗಳೂರು): ಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಮಹಿಳೆಯನ್ನು ರಕ್ಷಿಸಿ, ಮೂವರನ್ನು ಬಂಧಿಸಿದ್ದಾರೆ. ಯಲಹಂಕ ಬಳಿಯ ವಿದ್ಯಾರಣ್ಯಪುರದ ಜಯಕೃಷ್ಣ ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿದ್ಯಾರಣ್ಯಪುರ ಪೊಲೀಸರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: ಬಾಲ ಮಂದಿರಗಳಿಂದ ಮಕ್ಕಳು ನಾಪತ್ತೆ ಪ್ರಕರಣ- ವರದಿ ಕೇಳಿದ ಹೈಕೋರ್ಟ್

ವೇಶ್ಯಾವಾಟಿಕೆ ನಡೆಸುತ್ತಿದ್ದ ಸಿ.ಆರ್.ಮಧು (43), ವೇಶ್ಯಾವಾಟಿಕೆಗೆ ಮಹಿಳೆಯರನ್ನು ಪೂರೈಸುತ್ತಿದ್ದ ರಫಿಕುಲ್ ಇಸ್ಲಾಂ (21), ರುಬೇಲ್ ಮಂಡಲ್ (28)ಎನ್ನುವವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪಶ್ಚಿಮ ಬಂಗಾಳ, ಅಸ್ಸೋಂ ರಾಜ್ಯಗಳಿಂದ ಬಡ ಮತ್ತು ದುರ್ಬಲ ವರ್ಗದ ಮಹಿಳೆಯರನ್ನು ಕರೆ ತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.