ಬೆಂಗಳೂರು: ಸಿಎಂ ಯಡಿಯೂರಪ್ಪ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ತಲಾ 3 ಸಾವಿರ ರೂ. ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೋವಿಡ್ 19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್ ಅಡಿ ಈ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ 749.55 ಕೋಟಿ ರೂ ಪರಿಹಾರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ.
25 ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ತಲಾ 3 ಸಾವಿರ ನೆರವು: ಸಿಎಂ ಚಾಲನೆ - ಕರ್ನಾಟಕ ಲಾಕ್ಡೌನ್
ಕ್ಷೌರಿಕರು, ಅಗಸರು, ಟೈಲರುಗಳು, ಹಮಾಲರು, ಗೃಹ ಕಾರ್ಮಿಕರು, ಮೆಕ್ಯಾನಿಕ್ಗಳು, ಚಿಂದಿ ಆಯುವವರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ತಲಾ 3 ಸಾವಿರ ರೂ. ನೆರವು ಘೋಷಿಸಲಾಗಿದ್ದು, ಇದಕ್ಕಾಗಿ ಸೇವಾ ಸಿಂಧುವಿನಡಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ
ಬೆಂಗಳೂರು: ಸಿಎಂ ಯಡಿಯೂರಪ್ಪ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ತಲಾ 3 ಸಾವಿರ ರೂ. ಸಹಾಯ ಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೋವಿಡ್ 19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಘೋಷಿಸಲಾದ ಪ್ಯಾಕೇಜ್ ಅಡಿ ಈ ಕಾರ್ಯಕ್ರಮದಲ್ಲಿ ಸುಮಾರು 25 ಲಕ್ಷ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗುತ್ತಿದೆ. ಇದಕ್ಕಾಗಿ 749.55 ಕೋಟಿ ರೂ ಪರಿಹಾರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ.
Last Updated : Jun 5, 2021, 4:59 PM IST