ETV Bharat / city

ದಿನಕ್ಕೆ ರಾಜ್ಯದಲ್ಲಿ ಉತ್ಪಾದನೆಯಾಗುವ ಕೊರೊನಾ ತ್ಯಾಜ್ಯ ಎಷ್ಟು ಅನ್ನೋ ಲೆಕ್ಕ ಕೇಳಿದರೆ!!? - ಸಚಿವ ಸುಧಾಕರ್

ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಬಳಸುವ ಮಾಸ್ಕ್​, ಪಿಪಿಇ ಕಿಟ್​, ಕೈಗವಸು ಸೇರಿದಂತೆ ರಾಜ್ಯದಲ್ಲಿ ಮೂರು ಟನ್​ ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್​ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

minister sudhakar
ಸಚಿವ ಸುಧಾಕರ್
author img

By

Published : Jun 16, 2020, 10:50 AM IST

ಬೆಂಗಳೂರು: ಕರ್ನಾಟಕದಲ್ಲಿ ದಿನಕ್ಕೆ ಮೂರು ಸಾವಿರ ಕೆ.ಜಿಯಷ್ಟು ಕೊರೊನಾ ತ್ಯಾಜ್ಯ ಉತ್ಪತ್ತಿಯಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ ಸ್ಪಷ್ಟನೆ ನೀಡಿದ್ದಾರೆ.

  • ಕರ್ನಾಟಕದಲ್ಲಿ ದಿನಂಪ್ರತಿ 3000 ಕೆಜಿ ಯಷ್ಟು ಕೊರೊನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ.ಮಾಸ್ಕ್ , ಪಿಪಿಇ ಕಿಟ್ ,ಕೈ ಗವುಸುಗಳು ಇದರ ಮೂಲ.ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು ಅದು ಕ್ಲಿಷ್ಟಕರ ಕೂಡಾ ,ಈ ತ್ಯಾಜ್ಯಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆಯನ್ನು ರೂಡಿಸಿಕೊಳ್ಳಬೇಕು ಎಂದು ಮನವಿ

    — Dr Sudhakar K (@mla_sudhakar) June 16, 2020 " class="align-text-top noRightClick twitterSection" data=" ">

ಟ್ವಿಟರ್​ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸುಧಾಕರ್​​​​ ಮಾಸ್ಕ್, ಪಿಪಿಇ ಕಿಟ್, ಕೈಗವಸಗಳು ತ್ಯಾಜ್ಯದ ಮೂಲವಾಗಿದ್ದು. ಈ ತ್ಯಾಜ್ಯದ ವಿಲೇವಾರಿ ವೈಜ್ಞಾನಿಕವಾಗಿ ಆಗಬೇಕು. ಆದರೆ, ವಿಲೇವಾರಿ ಕ್ಲಿಷ್ಟಕರವಾಗಿದ್ದು, ಈ ತ್ಯಾಜ್ಯ ಕಡಿಮೆ ಮಾಡಲು ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮರು ಬಳಕೆಯ ಮಾಸ್ಕ್ ಬಳಕೆ ರೂಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

  • ಕಳೆದ 10 ದಿನಗಳಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕೋವಿಡ್ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಿದ ಜಿಲ್ಲೆಗಳಲ್ಲಿ ಯಾದಗಿರಿ ಮೊದಲ ಸ್ಥಾನದಲ್ಲಿದೆ. ಈ ಜಿಲ್ಲೆಯಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಯಲ್ಲಿ 7,297 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.ಪ್ರತಿ ಮಿಲಿಯನ್’ಗೆ 4,843 ಪರೀಕ್ಷೆ ಮಾಡುವ ಮೂಲಕ ಕಲಬುರ್ಗಿ 2ನೆ ಸ್ಥಾನದಲ್ಲಿದೆ

ಮತ್ತೊಂದು ಟ್ವೀಟ್​ನಲ್ಲಿ ಕಳೆದ 10 ದಿನಗಳಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ಕೋವಿಡ್ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಯಾದಗಿರಿಯಲ್ಲಿ ಅತಿ ಹೆಚ್ಚು ಸೋಂಕು ಪರೀಕ್ಷೆ ಮಾಡಲಾಗಿದೆ. ಇಲ್ಲಿ 7,297 ಮಂದಿಗೆ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಎರಡನೇ ಸ್ಥಾನದಲ್ಲಿ ಕಲಬುರಗಿ ಜಿಲ್ಲೆಯಿದೆ ಎಂದು ಟ್ವಿಟರ್​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.