ಬೆಂಗಳೂರು : ಭಗವದ್ಗೀತೆ ಮತ್ತು ಕುರಾನ್ ಅನ್ನು ಅಧ್ಯಯನಕ್ಕೆ ಒಳಪಡಿಸಿ, ಅವುಗಳಲ್ಲಿ ಒಳ್ಳೆಯ ಸಂಗತಿಗಳಿದ್ದರೆ ಅವುಗಳನ್ನು ಅಳವಡಿಸಿಕೊಳ್ಳಿ, ಒಂದು ವೇಳೆ ಅವುಗಳಲ್ಲಿ ಕೆಟ್ಟ ಸಂಗತಿಗಳಿದ್ದರೆ ಎರಡನ್ನೂ ಅರಬ್ಬೀ ಸಮುದ್ರಕ್ಕೆ ಬಿಸಾಕಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದರು.
ವಿಧಾನಸೌಧದಲ್ಲಿ ಹಲಾಲ್ ಬ್ಯಾನ್ ವಿಚಾರವಾಗಿ ಮಾತನಾಡಿದ ಅವರು, ಹಲಾಲ್ ಮಾಂಸ ಉಪಯೋಗಿಸಿ ಅಂತಾ ಹೇಳುವುದಕ್ಕೆ ಹೇಗೆ ರೈಟ್ಸ್ ಇದೆಯೋ, ಹಾಗೇ ಅದನ್ನು ಬಹಿಷ್ಕರಿಸಿ ಅಂತಾ ಹೇಳುವ ರೈಟ್ಸ್ ನಮಗೆ ಇದೆ. ಹಲಾಲ್ ಅಂದ್ರೆ ಮುಸ್ಲಿಂರ ಧಾರ್ಮಿಕ ಕ್ರಿಯೆ. ಅದು ಅವರಿಗೆ ಪ್ರಿಯವಾಗಿರುತ್ತದೆ. ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕು ಅಂತೇನಾದ್ರು ಇದೆಯಾ? ಸಾಮರಸ್ಯವನ್ನು ಹೇರೋದಕ್ಕೆ ಬರೋದಿಲ್ಲ.
ಹಾಗಂತಾ, ಸಾಮರಸ್ಯ ಒನ್ ವೇ ಅಲ್ಲ ಅದು ಟೂ ವೇ. ಹಲಾಲ್ ಇಲ್ಲದ ಮಾಂಸ ಅವರು ತಿನ್ನೋದಕ್ಕೆ ರೆಡಿಯಾದ್ರೆ ಹಲಾಲ್ ಆಗಿರುವ ಮಾಂಸ ಇವರು ತಿನ್ನುತ್ತಾರೆ. ಈ ಹಿಂದೆ ಇರುವಂತ ನಿಯಮಗಳನ್ನೆಲ್ಲ ಈಗಲೂ ಒಪ್ಪಿಕೊಳ್ಳಲು ಆಗುತ್ತಾ? ಎಂದು ಪ್ರಶ್ನಿಸಿದರು. ಹಲಾಲ್ ಅನ್ನೋದು ಒಂದು ಆರ್ಥಿಕ ಜಿಹಾದ್. ಆರ್ಥಿಕ ಜಿಹಾದ್ ಅಂದ್ರೆ ಮುಸ್ಲಿಮರು ಇನ್ನೊಬ್ಬರ ಜೊತೆ ವ್ಯಾಪಾರ ಮಾಡಬಾರದು ಅಂತಾ ಒಂದು ಎಕಾನಾಮಿಕ್ ಜಿಹಾದ್ ತರಹ ಉಪಯೋಗಿಸುತ್ತಾರೆ.
ಹಲಾಲ್ ಮಾಂಸವನ್ನು ಉಪಯೋಗಿಸಬಾರದು ಅಂದ್ರೆ ತಪ್ಪೇನು? ಹಾಲಾಲ್ ಮಾಂಸ ಅವರ ದೇವರಿಗೆ ಒಪ್ಪಿಸಿದ್ದು ಅವರಿಗೆ ಪ್ರಿಯ. ನಮ್ಮ ದೇವರಿಗೆ ಎಂಜಲು. ಒಬ್ಬ ಹಿಂದು ಮಟನ್ ಸ್ಟಾಲ್ ಇಟ್ಟರೆ ಮುಸ್ಲಿಂರು ಬಂದು ತಗೋತಾರಾ? ಮುಸ್ಲಿಂರ ಅಂಗಡಿಯಲ್ಲಿ ತಗೋಬೇಕು ಅಂತಾ ನೀವು ಯಾಕೆ ಹೇಳ್ತೀರಾ? ಹೇಳೋಕೆ ಏನ್ ರೈಟ್ಸ್ ಇದೆ ಎಂದು ಕೇಳಿದರು.
ಇದನ್ನೂ ಓದಿ: ಸುಸ್ಥಿರ ಗಣಿಗಾರಿಕೆಗೆ ಸಮಗ್ರ ಯೋಜನೆ ರೂಪಿಸಿ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ
ಸಚಿವ ಈಶ್ವರಪ್ಪ ಮೇಲೆ ಆರೋಪ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯದಲ್ಲಿ ಬಹಳ ಸಂಗತಿಗಳಿಗೆ ಆಧಾರ ಇರಲ್ಲ. ಇದ್ದರೆ ದೂರು ಕೊಡುತ್ತಿದ್ದರು. ಸಚಿವ ಈಶ್ವರಪ್ಪ ನಾಲ್ಕೂವರೆ ದಶಕದಿಂದ ರಾಜಕೀಯ ಮಾಡುತ್ತಿದ್ದಾರೆ. ಅವರು ನೇರ ನೇರ ಮಾತಾಡುತ್ತಾರೆ. ಇದರ ಹಿಂದೆ ರಾಜಕೀಯ ಇರಬೇಕು.
ಅಂತಹವರಿಗೆ ಶತ್ರುಗಳು ಜಾಸ್ತಿ ಇರುತ್ತಾರೆ. ಸಂದರ್ಭವನ್ನು ದುರುಪಯೋಗಪಡಿಸಿಕೊಳ್ಳಲು ಕೆಲವು ಬ್ರೋಕರ್ಗಳು ಪ್ರಯತ್ನ ಮಾಡುತ್ತಿರುತ್ತಾರೆ. ಯಾವ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೆ ಎಂದು ನೋಡಬೇಕು. ಇದು ಸತ್ಯಕ್ಕೆ ದೂರವಾದದ್ದು ಅಂತಾ ನನಗೆ ಅನ್ನಿಸುತ್ತದೆ ಎಂದು ತಿಳಿಸಿದರು.