ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ಇಂದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಹಲವು ಜಿಲ್ಲೆಗಳಿಂದ ರೈತರು ಆಗಮಿಸಿ ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದು, ವಿಶೇಷವಾಗಿ ನಗರದಲ್ಲಿ ಬಾರುಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ ಎನ್ನಲಾಗ್ತಿದೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ಹಾಗೂ ಕರವೇ ಸಂಘಟನೆಗಳು ಬೆಂಬಲ ನೀಡಿದ್ದು, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಹೋರಾಟಗಾರರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕುವಂತೆ ಪ್ಲಾನ್ ಮಾಡಿದ್ದು, ಈ ಹಿನ್ನೆಲೆ ರೈಲೆ ನಿಲ್ದಾಣಕ್ಕೆ ಬ್ಯಾರಿಗೇಟ್ ಹಾಕಿ, ಸ್ಥಳದಲ್ಲಿ ಉಪ್ಪಾರ ಪೇಟೆ ಪೊಲೀಸರು ಹಾಗೂ ಎರಡು ಕೆಎಸ್ಆರ್ಪಿ, ಅಶ್ರುವಾಯು, ವಾಟರ್ ಜೆಟ್ ನಿಯೋಜನೆ ಮಾಡಲಾಗಿದೆ. ಜೊತೆಗೆ ಹಿರಿಯ ಅಧಿಕಾರಿಗಳು ರೈಲ್ವೆ ನಿಲ್ದಾಣದ ಸುತ್ತ ಮೊಕ್ಕಾಂ ಹೂಡಿದ್ದಾರೆ.