ETV Bharat / city

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತದ ಎಫೆಕ್ಟ್: ಶಾಸಕರ ಭವನದಲ್ಲಿ ಮೊಟ್ಟೆ ಬ್ಯಾನ್? - ಶಾಸಕರ ಭವನದಲ್ಲೂ ಪ್ರತಿಭಟನೆ

ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲೂ ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಅಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

tight-security-at-shasakara-bhavana-in-bengaluru
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತದ ಎಫೆಕ್ಟ್: ಶಾಸಕರ ಭವನದಲ್ಲಿ ಮೊಟ್ಟೆ ಬ್ಯಾನ್?
author img

By

Published : Aug 20, 2022, 5:41 PM IST

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದಿಂದ ಕೆರಳಿ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಬಹುದೆಂಬ ಕಾರಣಕ್ಕೆ ಬೆಂಗಳೂರಿನ ಶಾಸಕರ ಭವನದಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿಲ್ಲ.

ಇತ್ತೀಚೆಗೆ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಅವರು ತೆರಳುತ್ತಿದ್ದ ಕಾರಿನ ಮೇಲೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಮೊಟ್ಟೆ ಎಸೆದಿದ್ದರು. ಈ ಘಟನೆಯು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ. ಸೇರಿಗೆ ಸವ್ವಾ ಸೇರು ಎಂಬಂತೆ ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆಯಬಹುದೆಂಬ ಶಂಕೆ ವ್ಯಕ್ತವಾಗಿದೆ.

ಇದರ ಜೊತೆಗೆ ಆಗಸ್ಟ್ 26 ರಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲೂ ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಅಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಅಲ್ಲದೇ, ಈ ಹಿಂದೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕೊಠಡಿ ಮೇಲೆ ದಾಳಿ ನಡೆದಿತ್ತು. ಹೀಗಾಗಿಯೇ ಶಾಸಕರ ಭವನದಲ್ಲಿರುವ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಹಾಗೂ ಶಾಸಕ ಅಪ್ಪಚ್ಚು ರಂಜನ್ ಅವರ ಕೊಠಡಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ಮೊಟ್ಟೆ ಪ್ರಕರಣ: ಬೆಂಗಳೂರಲ್ಲಿ ಮಾಜಿ ಸಿಎಂಗಿಲ್ಲ ಸೂಕ್ತ ಭದ್ರತೆ.. ಬಿಜೆಪಿ ಶಾಸಕರಿಗೆ ಭರ್ಜರಿ ಸುರಕ್ಷತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.