ETV Bharat / city

ಆದೇಶ ಪಾಲಿಸದ ಅಧಿಕಾರಿಗಳ ಜೈಲಿಗಟ್ಟಬೇಕು.. ಐಎಎಸ್​ ಅಧಿಕಾರಿಗಳ ವಿರುದ್ಧ ಹೈಕೋರ್ಟ್​ ಕಿಡಿ - ಆದೇಶ ಪಾಲಿಸದ ಅಧಿಕಾರಿಗಳ ಜೈಲಿಗೆ ಹಾಕಿ ಎಂದ ಕೋರ್ಟ್​

ಪುರಸಭೆ ಸಂಸ್ಥೆಗಳ ಗ್ರೂಪ್​ ಸಿ, ಡಿ ಹುದ್ದೆಗಳ ವಿಲೀನಕ್ಕೆ ನೀಡಿದ್ದ ಆದೇಶವನ್ನು ಪಾಲಿಸದ ಐಎಎಸ್​ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾದ ಕೋರ್ಟ್​, ಅಧಿಕಾರಿಗಳು ಜೈಲಿಗೆ ಕಳುಹಿಸಬೇಕಾದ ಸಮಯ ಬಂದಿದೆ ಎಂದು ಎಚ್ಚರಿಸಿದೆ.

time-has-come
ಹೈಕೋರ್ಟ್​ ಕಿಡಿ
author img

By

Published : Jun 7, 2022, 10:48 PM IST

ಬೆಂಗಳೂರು: ನ್ಯಾಯಾಲಯದ ಆದೇಶಗಳನ್ನು ಪಾಲಿಸದ ಇಬ್ಬರು ಹಿರಿಯ ಐಎಎಸ್​ ಅಧಿಕಾರಿಗಳ ಪ್ರವೃತ್ತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ನ್ಯಾಯಾಂಗ ನಿಂದನೆ ಆರೋಪದಲ್ಲಿ ಆ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವ ಸಮಯ ಬಂದಿದೆ ಎಂದು ಮೌಖಿಕವಾಗಿ ಎಚ್ಚರಿಸಿದೆ.

ಪುರಸಭೆ ಸಂಸ್ಥೆಗಳ ಗ್ರೂಪ್​ ಸಿ ಮತ್ತು ಡಿ ಹುದ್ದೆಗಳನ್ನು ವಿಲೀನಗೊಳಿಸುವಂತೆ ಕಳೆದ ವರ್ಷ ನೀಡಿದ್ದ ಆದೇಶವನ್ನು ಇಬ್ಬರು ಹಿರಿಯ ಐಎಎಸ್​ ಅಧಿಕಾರಿಗಳು ಪಾಲಿಸದ್ದಕ್ಕೆ ಕೆಂಡಾಮಂಡಲವಾದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ, ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿತು.

ಪುರಸಭೆಯ ಸಂಸ್ಥೆಗಳಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳನ್ನು ವಿಲೀನಗೊಳಿಸುವ ನಿಯಮಗಳಿಗೆ ತಿದ್ದುಪಡಿ ತರುವ ಕುರಿತು ಕಳೆದ ವರ್ಷ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪಾಲಿಸದಿರುವುದು ನ್ಯಾಯಾಂಗ ನಿಂದನೆ ಮಾಡಿದಂತೆ. ಇದನ್ನು ಪಾಲಿಸದ ಅಧಿಕಾರಿಗಳನ್ನು ಜೈಲಿಗೆ ಕಳಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಗ್ರೂಪ್​ ಸಿ, ಡಿ ಹುದ್ದೆಗಳನ್ನು ವಿಲೀನಗೊಳಿಸಬೇಕು ಎಂದು ಜುಲೈ 19, 2021 ರಂದು ಕೋರ್ಟ್​ ಆದೇಶ ನೀಡಿತ್ತು. ಆದರೆ, ವರ್ಷ ಕಳೆದರೂ ಆದೇಶ ಜಾರಿ ಮಾಡದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ನಗರಾಭಿವೃದ್ಧಿ ಇಲಾಖೆ) ರಾಕೇಶ್ ಸಿಂಗ್ ಮತ್ತು ಪೌರಾಡಳಿತ ನಿರ್ದೇಶಕಿ ಎಂ.ಎಸ್.ಅರ್ಚನಾ ಅವರ ವಿರುದ್ಧ ನೌಕರರ ಸಂಘ ಕೋರ್ಟ್​ಗೆ ನಿಂದನಾ ಅರ್ಜಿ ಸಲ್ಲಿಸಿದೆ.

ಈ ಹಿಂದಿನ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಆದೇಶ ಜಾರಿಗೆ ಭರವಸೆ ನೀಡಿದ್ದ ಅಧಿಕಾರಿಗಳು, ವರ್ಷ ಕಳೆದರೂ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ಕೋರ್ಟ್​ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದೆ.

ಆಕ್ಷೇಪಣೆಗಾಗಿ 15 ದಿನ ಅವಕಾಶ: ಇಬ್ಬರು ಐಎಎಸ್​​ ಅಧಿಕಾರಿಗಳ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಏಕ ಸದಸ್ಯ ಪೀಠದ ಆದೇಶಕ್ಕೆ ಅನುಗುಣವಾಗಿ ಜೂನ್ 3, 2022 ರಂದು ಕರಡು ಅಧಿಸೂಚನೆ ಹೊರಡಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ವಾದ ಆಲಿಸಿದ ಪೀಠವು, ಅರ್ಜಿದಾರರ ಕೋರಿಕೆಯ ಮೇರೆಗೆ ವಿಚಾರಣೆಯನ್ನು 6 ವಾರಗಳವರೆಗೆ ಮುಂದೂಡಿತು.

ಓದಿ: ಶಾಲೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.