ETV Bharat / city

ಪ್ರತಾಪ್ ಗೌಡ ಪಾಟೀಲರಿಗೆ ಬಿಜೆಪಿ ಟಿಕೆಟ್​ ಫಿಕ್ಸ್​​ ​: ಬೆಳಗಾವಿ, ಬಸವಕಲ್ಯಾಣ ಅಭ್ಯರ್ಥಿ ಆಯ್ಕೆ ಜವಾಬ್ದಾರಿ ಕಟೀಲ್ ಹೆಗಲಿಗೆ

author img

By

Published : Mar 20, 2021, 11:04 AM IST

ಮಲ್ಲೇಶ್ವರಂನಲ್ಲಿರುವ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಾಯಿತು. ಈ ವೇಳೆ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತಾಪ್ ಗೌಡ ಪಾಟೀಲರಿ​ಗೆ ಟಿಕೆಟ್ ನೀಡಬೇಕು ಹಾಗೂ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ನೀಡುವ ತೀರ್ಮಾನವನ್ನು ಕೈಗೊಳ್ಳಲಾಗಿದೆ.

bjp
bjp

ಬೆಂಗಳೂರು: ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತಾಪ್ ಗೌಡ ಪಾಟೀಲರಿಗೆ ಟಿಕೆಟ್ ನೀಡಬೇಕು ಹಾಗೂ ಬೆಳಗಾವಿ ಲೋಕಸಭೆ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ನೀಡಬೇಕೆಂಬ ತೀರ್ಮಾನವನ್ನು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಯಿತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಪ್ರತಾಪ್ ಗೌಡ ಪಾಟೀಲರಿಗೆ ಟಿಕೆಟ್ ನೀಡಬೇಕೆಂದು ಸಿಎಂ ಯಡಿಯೂರಪ್ಪ ಪ್ರಸ್ತಾಪ ಮಾಡಿದ್ದು, ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎನ್ನುವ ಸಿಎಂ ಹೇಳಿಕೆಗೆ ಕೋರ್ ಕಮಿಟಿ ಸಹಮತ ವ್ಯಕ್ತಪಡಿಸಿತು. ಆದರೆ ಬೆಳಗಾವಿ ಮತ್ತು ಬಸವಕಲ್ಯಾಣ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸದೆ ಮತ್ತೊಮ್ಮೆ ಸ್ಥಳೀಯ ನಾಯಕರೊಂದಿಗೆ ಸಮಾಲೋಚಿಸಿ ಹೈಕಮಾಂಡ್​ಗೆ ಕಳಿಸಿಕೊಡುವ ಜವಾಬ್ದಾರಿಯನ್ನು ಕೋರ್ ಕಮಿಟಿ ರಾಜ್ಯಾಧ್ಯಕ್ಷರಿಗೆ ನೀಡಿತು.

ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸ್ಥಳೀಯ ಸಂಸ್ಥೆ, ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆಗೆ ಕ್ಷೇತ್ರಗಳ ಮೀಸಲಾತಿ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯ ರಾಜಕಾರಣದ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಏಪ್ರಿಲ್ 6ಕ್ಕೆ ಪಕ್ಷ ಸ್ಥಾಪನೆಯಾಗಿ 41 ವರ್ಷ ಆಗಲಿದೆ. ಅದನ್ನು ಆಧಾರವಾಗಿಟ್ಟುಕೊಂಡು ಸಂಘಟನಾತ್ಮಕ ಕಾರ್ಯಕ್ರಮವನ್ನು ಯಾವ ರೀತಿ ಆಯೋಜಿಸಬೇಕು ಎಂದು ಚರ್ಚೆಯಾಗಿದೆ ಎಂದರು.

ಬೆಳಗಾವಿ ಲೋಕಸಭಾ ಉಪ ಚುನಾವಣೆ, ಬಸವಕಲ್ಯಾಣ ವಿಧಾನಸಭೆ ಮತ್ತು ಮಸ್ಕಿ ವಿಧಾನಸಭಾ ಉಪ ಚುನಾವಣೆ ಕುರಿತು ಚರ್ಚೆ ನಡೆಸಲಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಿದ್ದೇವೆ. ಸ್ಥಳೀಯವಾಗಿ ಅಭಿಪ್ರಾಯವನ್ನು ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿಕೊಡಬೇಕು ಎಂದು ನಿರ್ಧರಿಸಲಾಗಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷದ ಪ್ರಮುಖರ ಜೊತೆಗೆ ಸಮಾಲೋಚನೆ ನಡೆಸಿ, ನಂತರ ಸಂಭಾವ್ಯ ಅಭ್ಯರ್ಥಿಗಳ ಹೆಸರನ್ನು ಕಳುಹಿಸಿ ಕೊಡುವ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ ಎಂದರು.

ಪ್ರತಾಪ್ ಗೌಡ ಪಾಟೀಲ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆ. ಸ್ವಾಭಾವಿಕವಾಗಿ ಅವರಿಗೆ ನ್ಯಾಯ ಕೊಡಬೇಕಾಗಿದೆ. ಎರಡು ವರ್ಷದ ಅವರ ಅಜ್ಞಾನವಾಸಕ್ಕೆ ಮುಕ್ತಿ ಕೊಡಬೇಕಿದೆ ಎನ್ನುವ ಮೂಲಕ ಪ್ರತಾಪ್ ಗೌಡ ಪಾಟೀಲ ಅವರ ಒಂದೇ ಹೆಸರನ್ನು ಮಸ್ಕಿಯಿಂದ ಕಳುಹಿಸಿಕೊಡುವ ಅಭಿಪ್ರಾಯ ವ್ಯಕ್ತಪಡಿಸಿದರು.

ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಬಹಳ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಿಡಿ ವಿಚಾರದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ಕೋರ್ ಕಮಿಟಿ ಸಭೆಯಲ್ಲಿ ಅದರ ಬಗ್ಗೆ ಚರ್ಚೆಯೂ ಆಗಿಲ್ಲ ಎಂದ ಸಿ.ಟಿ. ರವಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಷಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಜಗದೀಶ ಶೆಟ್ಟರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇನ್ನು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ನಿತರರಾಗಿರುವ ಸಚಿವ ಅರವಿಂದ ಲಿಂಬಾವಳಿ, ಕಂದಾಯ ಇಲಾಖೆ ಕಾರ್ಯಕ್ರಮ ನಿಮಿತ್ತ ಗ್ರಾಮ ವಾಸ್ತವ್ಯಕ್ಕೆ ತೆರಳಿರುವ ಅಶೋಕ್, ಕೆ.ಎಸ್.ಈಶ್ವರಪ್ಪ, ಸಿಎಂ ಉದಾಸಿ ಕೋರ್ ಕಮಿಟಿಗೆ ಗೈರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.