ಬೆಂಗಳೂರು: ರಾಜ್ಯದಲ್ಲಿ ಇಂದು 16,256 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,108 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 997 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು 39,39,617 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್ ಸಾವಿನ ಸಂಖ್ಯೆ ಶೂನ್ಯ.
ಸದ್ಯ ಸಕ್ರಿಯ ಪ್ರಕರಣಗಳು 7,680 ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 6.82 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 4.61 ರಷ್ಟಿದೆ. ಇಲ್ಲಿಯವರೆಗೂ ಪರಿಕ್ಷೀಸಲಾದ ಒಟ್ಟು ಸಂಖ್ಯೆ 6,74,22,107. ವಾರದ ಸಾವಿನ ಪ್ರಮಾಣ ಶೇ. 0.08 ರಷ್ಟಿದೆ.
ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 5,952 ಮಂದಿ ಒಳಗಾಗಿದ್ದು, ಇದುವರೆಗೂ 12,34,648 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 993 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,20,438 ಕ್ಕೆ ಏರಿಕೆ ಆಗಿದೆ.
ಇಂದು 879 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,96,473 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳು 6,992 ಇದೆ. ಇದುವರೆಗೂ ಕೋವಿಡ್ ಸಾವಿನ ಸಂಖ್ಯೆ 16,972 ರಷ್ಟಿದೆ.
ಇದನ್ನೂ ಓದಿ : ಹೆರಿಗೆ ವೇಳೆ ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ವೈದ್ಯರು.. ನವಜಾತ ಶಿಶು ಸಾವು ಆರೋಪ