ಬೆಂಗಳೂರು: ರಾಜ್ಯದಲ್ಲಿಂದು 20,378 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 25,87,827 ಕ್ಕೆ ಏರಿಕೆ ಆಗಿದೆ.
ಓದಿ: ಸಮ್ಮತಿಯ ಸೆಕ್ಸ್: ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿಗೆ ಎಸ್ಐಟಿಯಿಂದ ಸಿಗುತ್ತಾ ಕ್ಲೀನ್ ಚಿಟ್?
28,053 ಸೋಂಕಿತರು ಗುಣಮುಖರಾಗಿದ್ದು, ಈ ತನಕ 22,17,117 ಜನರು ಡಿಚ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳು 3,42,010 ರಷ್ಟು ಇದೆ. ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡಾವಾರು 14.68 % ರಷ್ಟು ಇದ್ದು, ಸಾವಿನ ಶೇಕಡಾವಾರು ಪ್ರಮಾಣ 1.87 % ರಷ್ಟು ಇದೆ. ಕೋವಿಡ್ ಗೆ 382 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 28,679ಕ್ಕೆ ಏರಿದೆ. ವಿಮಾನ ನಿಲ್ದಾಣದಿಂದ 107 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು ಆಗಮಿಸಿದ್ದಾರೆ.
ಬೆಂಗಳೂರಿನಲ್ಲಿ 4,734 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ 11,59,237 ಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ. 6078 ಗುಣಮುಖರಾಗಿದ್ದು, 9,83,507 ಜನರು ಡಿಸ್ಚಾರ್ಜ್ ಆಗಿದ್ದಾರೆ. 213 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 13,104 ಕ್ಕೆ ಏರಿಕೆ ಆಗಿದೆ. ಸದ್ಯ 1,62,625 ಸಕ್ರಿಯ ಪ್ರಕರಣಗಳು ಬಾಕಿ ಇದೆ.