ಬೆಂಗಳೂರು: ಕೊರೊನಾ ಕರ್ಫ್ಯೂ ನಡುವೆಯೂ ರಾಜ್ಯದಲ್ಲಿ ಸೋಂಕಿನ ಸಂಖ್ಯೆ ಇಳಿಮುಖವಾಗಿಲ್ಲ. ಇಂದು ಕೂಡ 30 ಸಾವಿರ ಗಡಿ ದಾಡಿದ್ದು, 35,024 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,49,496 ಕ್ಕೆ ಏರಿದೆ.
ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 14,74,846ಕ್ಕೆ ಏರಿದೆ. ಇಂದು 270 ಸೋಂಕಿತರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 15,306ಕ್ಕೆ ಏರಿದೆ. 14,142 ಮಂದಿ ಗುಣಮುಖರಾಗಿದ್ದು, ಈವರೆಗೆ 11,10,025 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಬರೋಬ್ಬರಿ 2,431 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಕರಣಗಳ ಶೇಕಡವಾರು 19.92 ರಷ್ಟಿದ್ದು, ಸಾವಿನ ಶೇಕಡವಾರು ಪ್ರಮಾಣ 0.77 ರಷ್ಟಿದೆ.
ಬೆಂಗಳೂರಲ್ಲಿ 2.5 ಲಕ್ಷ ಸನಿಹದತ್ತ ಸಕ್ರಿಯ ಪ್ರಕರಣಗಳು: ರಾಜಧಾನಿ ಬೆಂಗಳೂರಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು, ಇಂದು 19,637 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 7,29,984 ಕ್ಕೆ ಏರಿದೆ.
ಇಂದು 6,128 ಗುಣಮುಖರಾಗಿದ್ದು, ಈವರೆಗೆ 4,86,183 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 143 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 6,282ಕ್ಕೆ ಏರಿದೆ. ಇನ್ನು 2,37,518 ಸಕ್ರಿಯ ಪ್ರಕರಣಗಳು ಇವೆ.