ETV Bharat / city

ಬಿಗ್​ಬಾಸ್ ರಾಜೀವ್ ಅಭಿನಯದ ಉಸಿರೇ ಉಸಿರೇ ಚಿತ್ರದಲ್ಲಿ ಟಾಲಿವುಡ್ ಹಾಸ್ಯ ನಟ ಎಂಟ್ರಿ - ಟಾಲಿವುಡ್​ ಹಾಸ್ಯ ನಟ ಅಲಿ ಎಂಟ್ರಿ

ಈ ಚಿತ್ರದ ಮೋಷನ್ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಲ್ಲದೇ ಸಿನಿಮಾದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸದ್ಯ ಉಸಿರೇ ಉಸಿರೇ ಸಿನಿಮಾ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ. ಈ ಸಿನಿಮಾ ಶೂಟಿಂಗ್​ನಲ್ಲಿ ಟಾಲಿವುಡ್ ಖ್ಯಾತ ಹಾಸ್ಯ ನಟ ಅಲಿ ಭಾಗಿಯಾಗಿದ್ದಾರೆ. ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಜೊತೆಯಾಗಿದ್ದಾರೆ..

usire-usire
ಉಸಿರೇ ಉಸಿರೇ
author img

By

Published : Jan 15, 2022, 7:45 PM IST

ಸಿಸಿಎಲ್ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಹೊಂದಿರುವ ನಟ ರಾಜೀವ್. ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ನಲ್ಲಿ ಭಾಗವಹಿಸಿ ಜನಮಸೂರೆಗೊಂಡಿದ್ದ ರಾಜೀ 'ಉಸಿರೇ ಉಸಿರೇ' ಚಿತ್ರದ ಮೂಲಕ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ.

ಈ ಚಿತ್ರದ ಮೋಷನ್ ಪೋಸ್ಟರ್ ಅನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದಲ್ಲದೇ ಸಿನಿಮಾದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸದ್ಯ ಉಸಿರೇ ಉಸಿರೇ ಸಿನಿಮಾ ಚಿತ್ರೀಕರಣ ಕೋಲಾರದಲ್ಲಿ ನಡೆಯುತ್ತಿದೆ. ಈ ಸಿನಿಮಾ ಶೂಟಿಂಗ್​ನಲ್ಲಿ ಟಾಲಿವುಡ್ ಖ್ಯಾತ ಹಾಸ್ಯ ನಟ ಅಲಿ ಭಾಗಿಯಾಗಿದ್ದಾರೆ. ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಜೊತೆಯಾಗಿದ್ದಾರೆ.

ಇವರೊಂದಿಗೆ ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಸಾಯಿಕುಮಾರ್, ಬ್ರಹ್ಮಾನಂದಂ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಬೆಂಗಳೂರು, ಕೋಲಾರ, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲವ್ ಸ್ಟೋರಿ ಕಥೆ ಆಧರಿಸಿರೋ ಉಸಿರೇ ಉಸಿರೇ ಸಿನಿಮಾಗೆ ನಿರ್ದೇಶಕ ಸಿ.ಎಂ.ವಿಜಯ್ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಸುಮಧುರ ಹಾಡುಗಳಿರುವ ಈ ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡಿದ್ದರೆ, ಸರವಣನ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ಎನ್.ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಪಕ ಪ್ರದೀಪ್ ಯಾದವ್ ಈ ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ಹಬ್ಬದಂದು ಅಪ್ಪು ನೆನೆದು ಫ್ಯಾನ್ಸ್​​ಗೆ ಸಿಹಿ ಸುದ್ದಿ ನೀಡಿದ ಶಿವಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.