ETV Bharat / city

ಮೆಸ್ಕಾಂ ಎಂಡಿಯಾಗಿ ಪ್ರಶಾಂತ್ ಕುಮಾರ್ ಮಿಶ್ರಾ ವರ್ಗಾವಣೆ!

author img

By

Published : Sep 3, 2020, 8:08 PM IST

ಮೆಸ್ಕಾಂನ ಎಂಡಿಯಾಗಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಆರ್.ಸ್ನೇಹಲ್ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಪ್ರಶಾಂತ್ ಕುಮಾರ್ ಮಿಶ್ರಾರನ್ನು ನಿಯೋಜಿಸಲಾಗಿದೆ.

transfer-of-prashant-kumar-mishra
ಪ್ರಶಾಂತ್ ಕುಮಾರ್ ಮಿಶ್ರಾ ವರ್ಗಾವಣೆ

ಬೆಂಗಳೂರು/ಮಂಗಳೂರು: ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಕ್ಕೊಳಗಾಗಿ ಎತ್ತಂಗಡಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾರನ್ನು ಮೆಸ್ಕಾಂ ಮ್ಯಾನೆಜಿಂಗ್ ಡೈರೆಕ್ಟರ್​​ ಆಗಿ‌ ಸರ್ಕಾರ ವರ್ಗಾಯಿಸಿದೆ.

ಮೆಸ್ಕಾಂನ ಎಂಡಿಯಾಗಿ ಸೇವೆ ಸಲ್ಲಿಸುತ್ತಿದ್ದ ಐಎಎಸ್ ಅಧಿಕಾರಿ ಆರ್.ಸ್ನೇಹಲ್ ಅವರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾಯಿಸಲಾಗಿದೆ. 2018ರ ಅಕ್ಟೋಬರ್​​ನಲ್ಲಿ ಮೆಸ್ಕಾಂ ಎಂಡಿಯಾಗಿ ಅಧಿಕಾರ ಸ್ವೀಕರಿಸಿದ ಸ್ನೇಹಲ್ ಅವರು, ಎರಡು ವರ್ಷಗಳ ಕಾಲ ಮಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದರು.

ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆಗೆ ಸಿಇಒ ಆಗಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಒತ್ತಡ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ವೈದ್ಯಾಧಿಕಾರಿಗಳು ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಸರ್ಕಾರ ಪ್ರಶಾಂತ್ ಅವರನ್ನು ಸ್ಥಳ ನಿಯೋಜಿಸದೇ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನು ಮೆಸ್ಕಾಂ ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.