ETV Bharat / city

ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಮುಷ್ಕರದ ಸದ್ದು: ಸೋಮವಾರ ಸಂಚರಿಸುತ್ತಾ ಬಸ್​​​?

author img

By

Published : Sep 18, 2021, 12:43 PM IST

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕಡೆಯಿಂದ ಫ್ರೀಡಂ ಪಾರ್ಕ್​​ನಲ್ಲಿ ಸೆಪ್ಟೆಂಬರ್ 20ರಂದು ಧರಣಿ ನಡೆಸಲು ನಿರ್ಧರಿಸಲಾಗಿದೆ.

transport employees protest
ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಸಾರಿಗೆ ನೌಕರರ ಪ್ರತಿಭಟನೆ‌ ಕೂಗು ಕೇಳಿ ಬರುತ್ತಿದೆ. ಈ ಹಿಂದೆ ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ದೀರ್ಘಾವಧಿ ಮುಷ್ಕರ ನಡೆಸಿದ್ದರು. ಸರ್ಕಾರದ ಮಾತಿಗೂ ಜಗ್ಗದ ನೌಕರರು ಕಡೆಗೆ ಕೋರ್ಟ್ ಮಧ್ಯಪ್ರವೇಶಕ್ಕೆ ಬಗ್ಗಿ ಕೆಲಸದಲ್ಲಿ ತೊಡಗಿದ್ದರು. ಮೂರು ತಿಂಗಳು ಕಳೆದ ಬಳಿಕ ಇದೀಗ ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕಡೆಯಿಂದ ಫ್ರೀಡಂ ಪಾರ್ಕ್​​ನಲ್ಲಿ ಸೆಪ್ಟೆಂಬರ್ 20ರಂದು ಧರಣಿ ನಡೆಸಲು ನಿರ್ಧರಿಸಲಾಗಿದೆ. ಬಿಎಂಟಿಸಿ, ಕೆಎಸ್ಆರ್​ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಈ ಧರಣಿಯಲ್ಲಿ ಭಾಗಿಯಾಗಲಿದ್ದಾರೆ.‌ ಹೀಗಾಗಿ ಸೋಮವಾರ ಬಸ್​​ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ.

ಬೇಡಿಕೆಯೇನು?

- ಏಪ್ರಿಲ್ 2021ರ ಮುಷ್ಕರದ ವೇಳೆ ಸೇವೆಯಿಂದ ವಜಾ ಮಾಡಿರುವ ಎಲ್ಲ ಕಾರ್ಮಿಕರನ್ನು ಕೆಲಸಕ್ಕೆ ಪುನರ್ ನೇಮಿಸಬೇಕು.

- ಟ್ರೈನಿ ನೌಕರರನ್ನು ಸೇವೆಯಿಂದ ಕೈಬಿಡಲಾಗಿದ್ದು, ಎಲ್ಲರನ್ನೂ ಪುನರ್ ನೇಮಕ ಮಾಡಬೇಕು.

- ವಿಭಾಗದಿಂದ ವಿಭಾಗಕ್ಕೆ ವರ್ಗಾವಣೆ ಮಾಡಿರುವ ನೌಕರರನ್ನು ತೆರವು ಮಾಡಬೇಕು ಹಾಗೂ ಎಲ್ಲ ಶಿಸ್ತು ಕ್ರಮಗಳನ್ನು ರದ್ದು ಮಾಡಬೇಕು.

- ಮುಷ್ಕರದ ಅವಧಿಯಲ್ಲಿ ಕಾರ್ಮಿಕರಿಗೆ ಅಪಾದನಾ ಪತ್ರ ನೀಡಲಾಗುತ್ತಿದೆ. ಇದನ್ನು ರದ್ದುಪಡಿಸಿ ಎಲ್ಲ ಶಿಸ್ತು ಪ್ರಕ್ರಿಯೆಗಳನ್ನ ನಿಲ್ಲಿಸುವಂತೆ ಒತ್ತಾಯ.

- ವೇತನ‌ಬಡ್ತಿ ತಡೆ ಹಿಡಿಯಲಾಗಿದ್ದು, ಅದನ್ನು ಸರಿಪಡಿಸಬೇಕು.

- ದಂಡ ವಿಧಿಸುವುದನ್ನು ನಿಲ್ಲಿಸಬೇಕು.

- ಸಿಬ್ಬಂದಿಯ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಬೇಕು.

ಇದನ್ನೂ ಓದಿ: ನಿನ್ನೆ ಒಂದೇ ದಿನ ರಾಜ್ಯದಲ್ಲಿ 29.50 ಲಕ್ಷ ಲಸಿಕೆ ವಿತರಣೆ.. ದೇಶದಲ್ಲೇ ಅತೀ ಹೆಚ್ಚು ಲಸಿಕೆ ನೀಡಿದ ಕರ್ನಾಟಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.