ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ ನಡುವಿನ ಮಾತುಕತೆ ಅಪೂರ್ಣವಾಗಿದೆ. ಇದರಿಂದಾಗಿ ನಾಳೆಯೂ ಕೂಡಾ ಮುಷ್ಕರ ಮುಂದುವರೆಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಮಾತನಾಡಿದ ಅವರು, ಸರ್ಕಾರ ನಮ್ಮೊಂದಿಗೆ ಅಪೂರ್ಣವಾದ ಚರ್ಚೆ ಮಾಡಿದೆ. ಸಿಎಂ ಬಿಎಸ್ವೈ ತೀರ್ಮಾನ ಕೈಗೊಳ್ಳುವುದರಿಂದ ಹಿಂದೆ ಸರಿದಿದ್ದಾರೆ. ನಾಳೆಯೂ ಮುಷ್ಕರ ನಡೆಯಲಿದೆ. ಈ ಮುಷ್ಕರಕ್ಕೆ ಖಾಸಗಿ ಬಸ್ ಮಾಲೀಕರ ಸಂಘ ಕೂಡಾ ಬೆಂಬಲ ನೀಡಿದೆ ಎಂದರು.
ಸೀಬೆಹಣ್ಣು, ಕಡಲೆಕಾಯಿ ಇಂದಿನ ಉಪವಾಸ ಮುಗಿಸಿ ಮಾತನಾಡಿದ ಅವರು ನಾಳೆ ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ನಾಳೆ ರಾಜ್ಯದಲ್ಲಿ ಬಸ್ ಸಂಚಾರ ಇರೋದಿಲ್ಲ. ಸಚಿವರು ಮಾಧ್ಯಮಗಳಿಗೆ ಸುಳ್ಳು ಹೇಳಿದ್ದಾರೆ. ಯಾವುದೇ ಸಂಧಾನ ಯಶಸ್ವಿಯಾಗಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಓದಿ: ಸಾರಿಗೆ ನೌಕರರ ಬಹುತೇಕ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಲಾಗಿದೆ: ಲಕ್ಷ್ಮಣ ಸವದಿ
ನಾಳೆ ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ನಾಳೆ ರಾಜ್ಯದಲ್ಲಿ ಬಸ್ ಸಂಚಾರ ಇರೋದಿಲ್ಲ. ಸಚಿವರು ಮಾಧ್ಯಮಗಳಿಗೆ ಸುಳ್ಳು ಹೇಳಿದ್ದಾರೆ. ಯಾವುದೇ ಸಂಧಾನ ಯಶಸ್ವಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಖಾಸಗಿ ಬಸ್ ಮಾಲೀಕರ ಒಕ್ಕೂಟದ ಅಧ್ಯಕ್ಷ ನಟರಾಜ್, ನಾವೂ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ನೀಡಿದ್ದೇವೆ. ಇದು ಸಾರಿಗೆ ಮಂತ್ರಿಯ ವೈಫಲ್ಯವಾಗಿದ್ದು, ಅವರು ತಮ್ಮ ಪ್ರತಿಷ್ಠೆಯನ್ನು ಕೈಬಿಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.