ETV Bharat / city

ಆನೇಕಲ್‌ನಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಸಾವು, ಮೂವರು ಗಂಭೀರ - ಮರಕ್ಕೆ ಡಿಕ್ಕಿ ಹೊಡೆದ ಕಾರು

ಆನೇಕಲ್​ನ ಸೋಲೂರು ಗೇಟ್​ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಘಟಿಸಿದೆ.

ಮರಕ್ಕೆ ಡಿಕ್ಕಿ ಹೊಡೆದ ಕಾರು
Car accident
author img

By

Published : Jul 18, 2022, 8:38 AM IST

ಆನೇಕಲ್: ಕಾರು ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಆನೇಕಲ್​ನ ಸೋಲೂರು ಗೇಟ್​ ಬಳಿ ನಡೆದಿದೆ. ಹೊಂಗಸಂದ್ರದ ಶಶಿಧರ್(31), ಕುಣಿಗಲ್ ಮೂಲದ ಭೈರೇಶ್ (34) ಮೃತರು. ಇವರಿಬ್ಬರೂ ಕೂಡ್ಲು ಬಳಿಯ ಗಾರ್ಮೆಂಟ್ಸ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರಾಹುಲ್, ಮಿಥುನ್, ತಿಪ್ಪೇಶ್ ಸ್ಥಿತಿ ಚಿಂತಾಜನಕವಾಗಿದೆ. ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಲಯ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ: ರಸ್ತೆಗೆ ಅಂಟಿಕೊಂಡಿದ್ದ ಮರ ತೆಗೆಯದೇ ವಲಯ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ರಸ್ತೆ ಅಗಲೀಕರಣ ಮಾಡಿದ್ದರೂ ಸಹ ಮರ ತೆರವು ಮಾಡಿರಲಿಲ್ಲ. ಹೀಗಾಗಿ, ಅಪಘಾತ ಸಂಭವಿಸುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವು, ಮತ್ತೋರ್ವ ಗಂಭೀರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.