ಬೆಂಗಳೂರು : ಪ್ರಯಾಣಿಕರ ಸೋಗಿನಲ್ಲಿ ಲಗೇಜ್ ಬ್ಯಾಗ್ ಮೂಲಕ ಹೊರ ರಾಜ್ಯದಿಂದ ಬಂದು ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ತ್ರಿಪುರ ಮತ್ತು ಬಿಹಾರದಿಂದ ಡ್ರಗ್ಸ್ ಸಾಗಾಟ ನಡೆಸುತ್ತಿದ್ದರು. ಗಾಂಜಾವನ್ನು ಪ್ಯಾಕೇಟ್ ಮಾದರಿಯಲ್ಲಿ ಸಿದ್ಧಪಡಿಸಿ ಬಳಿಕ ಆ ಪ್ಯಾಕೇಟ್ಗಳನ್ನು ಲಗೇಜ್ ಬ್ಯಾಗ್ಗಳಲ್ಲಿಟ್ಟು ಸಾಗಾಟ ಮಾಡುತ್ತಿದ್ದರು.
ಪ್ರಯಾಣಿಕರ ಸೋಗಿನಲ್ಲಿ ಹೊರ ರಾಜ್ಯದಿಂದ ಬೆಂಗಳೂರಿಗೆ ಬಂದು ಸಾರ್ವಜನಿಕವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 6.5 ಲಕ್ಷ ರೂ. ಮೌಲ್ಯದ 21.5 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.