ETV Bharat / city

ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ: ಚಿನ್ನಾಭರಣ, ಪಿಸ್ತೂಲ್, ಜೀವಂತ ಗುಂಡುಗಳು ವಶಕ್ಕೆ - two house thieves arrest

ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, 1 ಕೆ.ಜಿ 280 ಗ್ರಾಂ ಚಿನ್ನಾಭರಣ, ಅರ್ಧ ಕೆಜಿ ಬೆಳ್ಳಿ ಸೇರಿದಂತೆ ಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

arrest
arrest
author img

By

Published : Feb 25, 2021, 11:05 AM IST

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿದ್ದಾರೆ.

ಖುರ್ಷಿದ್ ಖಾನ್ ಹಾಗೂ ಧೀರೇಂದ್ರ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 1 ಕೆ.ಜಿ 280 ಗ್ರಾಂ ಚಿನ್ನಾಭರಣ, ಅರ್ಧ ಕೆಜಿ ಬೆಳ್ಳಿ ಸೇರಿದಂತೆ ಪಿಸ್ತೂಲ್ ಹಾಗೂ ಐದು ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿ ಖುರ್ಷಿದ್ ಖಾನ್, ದೆಹಲಿ ಹಾಗೂ ಹರಿಯಾಣದಿಂದ ಗ್ಯಾಂಗ್​ಅನ್ನು ಕರೆತಂದು ಕಳ್ಳತನ ಮಾಡುತ್ತಿದ್ದ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶ್ರೀಮಂತರ ಮನೆಗಳಿಗೆ ಕನ್ನ ಹಾಕಿ ಪರಾರಿಯಾಗುತ್ತಿದ್ದರು. ಈ ಕುರಿತು ಕೇಂದ್ರ ತನಿಖಾ ವಿಭಾಗ ಹೆಚ್ಚಿನ ತನಿಖೆ ಕೈಗೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.