ಬೆಂಗಳೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ಗೆ ಎರಡು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ನಗರದ ನಾಗವಾರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೊದಲು ಪೀಠೋಪಕರಣ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ನಂತರ ಪಕ್ಕದಲ್ಲಿದ್ದ ಗುಜರಿ ಮಳಿಗೆಗೂ ಬೆಂಕಿ ತಗುಲಿದೆ. ಪರಿಣಾಮ ಎರಡು ಅಂಗಡಿಗಳು ಬೆಂಕಿಗಾಹುತಿಯಾಗಿದೆ.
ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.