ಹೊಸಕೋಟೆ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುವರಂಗ ಬ್ರಿಡ್ಜ್‌ನಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಪಿಯು ಕಾಲೇಜಿನಲ್ಲಿ ಓದುತ್ತಿದ್ದ ಸುಪ್ರಿತಾ (18) ಹಾಗೂ ರಾಜೇಶ್ವರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯರು.
ನಿನ್ನೆ(ಮಂಗಳವಾರ) ಮಧ್ಯಾಹ್ನ ಮಾಲೂರು ಮೂಲದ ಸುಪ್ರಿತಾ ಮತ್ತು ಹೊಸಕೋಟೆ ತಾಲೂಕಿನ ಬಾಗೂರು ಮೂಲದ ರಾಜೇಶ್ವರಿ ಇಬ್ಬರೂ ಒಟ್ಟಿಗೆ ಕೊಳಚೆ ನೀರಿನ ನಾಲೆಗೆ ಹಾರಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಓರ್ವ ಯುವತಿಯ ಮೃತದೇಹ ಪತ್ತೆ ಮಾಡಿದ್ದು, ಮತ್ತೋರ್ವ ಯುವತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಕೊಳಚೆ ನೀರಿನಲ್ಲಿ ಬಿದ್ದ ಕಾರಣ ಮೃತದೇಹಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಅನುಗೊಂಡನಹಳ್ಳಿ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬಿಜೆಪಿ ಯುವ ಮುಖಂಡನಿಗೆ ಮಾರಣಾಂತಿಕ ಹಲ್ಲೆ.. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವು