ಬೆಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪಶ್ಚಿಮ ವಿಭಾಗದ ಬ್ಯಾಟರಾಯನಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 3.20 ಲಕ್ಷ ರೂಪಾಯಿ ಬೆಲೆ ಬಾಳುವ 74 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೈಸೂರು ರಸ್ತೆಯ ಬ್ಯಾಟರಾಯನಪುರ ಶಾಮಣ್ಣ ಗಾರ್ಡನ್‌ನಲ್ಲಿರುವ ಮನೆಯೊಂದರ ಮಂದಿ ಮಾ. 1ರಂದು ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಮನೆ ಬಾಗಿಲು ಹಾಕಿ ಪಕ್ಕದ ರಸ್ತೆಗೆ ಹೋಗಿದ್ದರು. ಬರುವಷ್ಟರಲ್ಲಿ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಎಸಿಬಿ ದಾಳಿ: ನ್ಯಾಯಾಲಯದ ಸಿಬ್ಬಂದಿ ಬಂಧನ
ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ಸ್‌ಪೆಕ್ಟರ್ ಶಂಕರ್ ನಾಯಕ್ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ..