ಬೆಂಗಳೂರು: ನಾಳೆ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ 2 ಸಾವಿರ ಹೆಚ್ಚುವರಿ ಖಾಸಗಿ ಬಸ್‌ಗಳು ಕಾರ್ಯನಿರ್ವಹಿಸಲಿವೆ.
ಒಟ್ಟು 9 ಸಾವಿರ ಸ್ಟೇಜ್ ಕ್ಯಾರಿಯರ್ ಖಾಸಗಿ ಬಸ್ಗಳಿದ್ದು, ಈ ಪೈಕಿ 7 ಸಾವಿರ ಬಸ್‌ಗಳು ಮಾತ್ರ ಸದ್ಯ ಕಾರ್ಯನಿರ್ವಹಿಸುತ್ತಿವೆ. ಉಳಿದ 2,000 ಸಾವಿರ ಬಸ್ಗಳನ್ನು ನಾಳೆಯಿಂದ ಹಂತ ಹಂತವಾಗಿ ಬೇಡಿಕೆಗನುಗುಣವಾಗಿ ರಸ್ತೆಗಿಳಿಸುವುದಾಗಿ ರಾಜ್ಯ ಖಾಸಗಿ ಬಸ್ ಸ್ಟೇಜ್ ಕ್ಯಾರಿಯೇಜ್ ಫೆಡರೇಷನ್ ಉಪಾಧ್ಯಕ್ಷ ಕೆ.ಕೆ.ಬಾಲಕೃಷ್ಣ ಮಾಹಿತಿ ನೀಡಿದ್ದಾರೆ.
ಸಾರಿಗೆ ಇಲಾಖೆ ಅಧಿಕಾರಿಗಳು ಎಲ್ಲಾ ಜಿಲ್ಲೆಗಳಲ್ಲಿ ಸಭೆ ಮಾಡಿ ಮನವಿ ಮಾಡಿದ್ದಾರೆ. ಹೀಗಾಗಿ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮಡಿಕೇರಿ, ಬೆಂಗಳೂರು ಗ್ರಾಮಾಂತರ, ರಾಮನಗರ, ಬಳ್ಳಾರಿ, ಕೋಲಾರ ಸೇರಿ 14 ಜಿಲ್ಲೆಗಳಲ್ಲಿ ಹೆಚ್ಚುವರಿ ಖಾಸಗಿ ಬಸ್‌ಗಳು ಸಂಚಾರ ನಡೆಸಲಿವೆ. ಜೊತೆಗೆ ಬಸ್ ದರದಲ್ಲಿ ಹೆಚ್ಚಳ ಇರಿವುದಿಲ್ಲ. ಈಗಿರೋ ದರದಲ್ಲೇ ಸೇವೆ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.
ಓದಿ: ‘6ನೇ ವೇತನ ಆಯೋಗ ಜಾರಿಯಿಲ್ಲ, ಸಂಧಾನವೂ ಇಲ್ಲ; ಮುಷ್ಕರ ನಡೆಸಿದ್ರೆ ಕಠಿಣ ಕ್ರಮ’