ETV Bharat / city

ಐಟಿ ದಾಳಿ​​​​​​​: ಸಿಎಂ ಕಚೇರಿಯಿಂದ ಉಮೇಶ್​ಗೆ ಗೇಟ್ ಪಾಸ್..!

ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸತ್ತಿದ್ದ ಉಮೇಶ್​​ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಮೇಶ್​ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

umesh-suspended-from-cm-office-work
ಬಸವರಾಜ ಬೊಮ್ಮಾಯಿ
author img

By

Published : Oct 7, 2021, 10:18 PM IST

ಬೆಂಗಳೂರು: ಆದಾಯ ತೆರಿಗೆ ದಾಳಿ ಬೆನ್ನಲ್ಲೇ ಸಿಎಂ ಕಚೇರಿಯಿಂದ ಉಮೇಶ್​ ಅವರನ್ನು ಅಮಾನತುಗೊಳಿಸುವಂತೆ ಹಿರಿಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಮೇಶ್ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಉಮೇಶ್​ ನೀರಾವರಿ ಯೋಜನೆಗಳ ಟೆಂಡರ್ ಅಕ್ರಮದ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚಾಮರಾಜನಗರದಿಂದಲೇ ಹಿರಿಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಸಿಎಂ, ಕೂಡಲೇ ಉಮೇಶ್​ರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಬಿ. ಎಸ್​​. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಆಪ್ತ ಸಹಾಯಕರಾಗಿದ್ದ ಉಮೇಶ್​ಗೆ, ಬಸವರಾಜ ಬೊಮ್ಮಾಯಿ ಸಿಎಂ ಆದ ನಂತರ ಅವರ ಕಚೇರಿಯಲ್ಲಿ ಉದ್ಯೋಗ ನೀಡಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.