ETV Bharat / city

ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ರಾಜ್ಯಕ್ಕೆ 1,221 ವಯಲ್ಸ್ ಹಂಚಿಕೆ: ಡಿವಿಎಸ್

481 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡು ಬಂದಿರುವ ರಾಜ್ಯಕ್ಕೆ 1,221 ವಯಲ್ಸ್ ಒದಗಿಸಲಾಗಿದ್ದು, ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂದು ಕೇಂದ್ರ ಸಚಿವ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

Sadananda Gowda
ಕೇಂದ್ರ ಸಚಿವ ಸದಾನಂದಗೌಡ
author img

By

Published : May 26, 2021, 1:01 PM IST

ಬೆಂಗಳೂರು: ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ರಾಜ್ಯಕ್ಕೆ 1,221 ವಯಲ್ಸ್ ಒದಗಿಸಿರುವುದಾಗಿ ಕೇಂದ್ರ ಸಚಿವ ಸದಾನಂದಗೌಡ ತಿಳಿಸಿದ್ದಾರೆ.

  • #BlackFungus #Amphotericin
    ದೇಶದಲ್ಲಿ 11717 ಕಪ್ಪುಶಿಲೀಂದ್ರ ಪ್ರಕರಣಗಳು ವರದಿಯಾಗಿದ್ದು ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 29250 ವಯಲ್ಸ್ ಎಂಫೋಟೆರಿಸಿನ್-ಬಿ ಹಂಚಲಾಗಿದೆ.
    481 ಕಪ್ಪುಶಿಲೀಂದ್ರ ಪ್ರಕರಣಗಳು ಕಂಡುಬಂದಿರುವ ರಾಜ್ಯಕ್ಕೆ 1221 ವಯಲ್ಸ್ ಒದಗಿಸಲಾಗಿದೆ. ಹಂಚಿಕೆ ನಿರಂತರವಾಗಿ ನಡೆಯಲಿದೆ. @BSYBJP pic.twitter.com/zx9BGD2IzA

    — Sadananda Gowda (@DVSadanandGowda) May 26, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಅವರು, ದೇಶದಲ್ಲಿ 11,717 ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ. ಬೇರೆ ಬೇರೆ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 29,250 ವಯಲ್ಸ್ ಎಂಫೋಟೆರಿಸಿನ್-ಬಿ ಹಂಚಲಾಗಿದೆ. 481 ಕಪ್ಪು ಶಿಲೀಂಧ್ರ ಪ್ರಕರಣಗಳು ಕಂಡು ಬಂದಿರುವ ರಾಜ್ಯಕ್ಕೆ 1,221 ವಯಲ್ಸ್ ಒದಗಿಸಲಾಗಿದ್ದು, ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕಕ್ಕೆ ನಿನ್ನೆ 1,030 ವಯಲ್ಸ್ ಒದಗಿಸಲಾಗಿದೆ. ಮೊನ್ನೆ 1,270 ವಯಲ್ಸ್ ಹಾಗೂ ಅದಕ್ಕೂ ಮುನ್ನ ಮೂರು ಕಂತುಗಳಲ್ಲಿ 1,660 ವಯಲ್ಸ್ ಒದಗಿಸಲಾಗಿತ್ತು. ದೇಶದಲ್ಲಿಯೇ ತ್ವರಿತವಾಗಿ ಲಿಪೋಸೊಮಾಲ್ ಎಂಫೋಟೆರಿಸಿನ್-ಬಿ ಉತ್ಪಾದನೆ ಹೆಚ್ಚಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ದೇಶದ ಐದು ಫಾರ್ಮಾ ಕಂಪನಿಗಳು ಇದರ ಉತ್ಪಾದನೆ ಮಾಡುತ್ತಿದ್ದು, ಈಗ ಹೊಸದಾಗಿ ಮತ್ತೆ ಐದು ಕಂಪನಿಗಳಿಗೆ ಲೈಸನ್ಸ್ ನೀಡಲಾಗಿದೆ.

ಓದಿ: ಬೆಂಗಳೂರಿನಲ್ಲಿ ಶುರುವಾಯ್ತು ಮೈಕ್ರೋ ಕಂಟೈನ್ಮೆಂಟ್ ಝೋನ್ ಪ್ರಕ್ರಿಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.