ಬೆಂಗಳೂರು: ರಾಜ್ಯದಲ್ಲಿ ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ ಹಾಗೂ ಬೆಳೆಗಳಿಗೆ ಸಂರಕ್ಷಿತ ದರ ಒದಗಿಸುವ ಬಗ್ಗೆ ನಿರ್ದಿಷ್ಟವಾಗಿ ನೀತಿ ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ರಾಜ್ಯದ ಕೃಷಿ ವಿಷಯಗಳ ಕುರಿತು ಶುಕ್ರವಾರ ಚರ್ಚೆ ನಡೆಸಿದರು. ರಾಜ್ಯದಲ್ಲಿ ಎಣ್ಣೆಕಾಳು ಉತ್ಪಾದನೆಗೆ ಒತ್ತು ನೀಡುವುದು, ತಾಳೆ ಬೆಳೆಗೆ ಉತ್ತೇಜನ ಹಾಗೂ ಕೃಷಿ ಉತ್ಪನ್ನ ಸಂಸ್ಕರಣೆ, ರಫ್ತಿಗೆ ಒತ್ತು ನೀಡುವ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.
ರಾಜ್ಯದಲ್ಲಿ ಎಣ್ಣೆಕಾಳು ಬೆಳೆಯಲು ಉತ್ತೇಜನ ನೀಡಲಾಗುತ್ತಿದೆ. ಆದರೆ ರೈತರಿಗೆ ವೈಜ್ಞಾನಿಕ ತರಬೇತಿ ಹಾಗೂ ಹೆಚ್ಚಿನ ಬೆಂಬಲದ ಅಗತ್ಯವಿದೆ. ಬೆಲೆಯಲ್ಲಿ ಭಾರಿ ಏರುಪೇರಾಗುವುದರಿಂದ ಉತ್ತಮ ಬೆಲೆ ಖಾತರಿ ಪಡಿಸಲು ಕ್ರಮ ವಹಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರವು ರೈತರು ನಮ್ಮ ದೇಶದಲ್ಲಿ ಬೆಳೆಯುವ ಬೆಳೆಗಳ ಆಮದಿಗೆ ತೆರಿಗೆ ವಿಧಿಸುವ ಮೂಲಕ ದೇಶದ ರೈತರಿಗೆ ನೆರವು ನೀಡಬೇಕು ಎಂದು ಸಿಎಂ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೂಲಕ ಕೇಂದ್ರಕ್ಕೆ ಮನವಿ ಮಾಡಿದರು.
ಎಣ್ಣೆಕಾಳು ಉತ್ಪಾದನೆಗೆ ಉತ್ತೇಜನ, ಸಂರಕ್ಷಿತ ದರ ಒದಗಿಸಲು ಪ್ರತ್ಯೇಕ ನೀತಿ: ಸಿಎಂ ಬೊಮ್ಮಾಯಿ
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ರಾಜ್ಯದ ಕೃಷಿ ವಿಷಯಗಳ ಕುರಿತು ಶುಕ್ರವಾರ ಚರ್ಚೆ ನಡೆಸಿದರು.