ETV Bharat / city

ರೈತರ ಹತ್ಯೆ 'ಜಲಿಯನ್ ವಾಲಾಬಾಗ್' ನರಮೇಧಕ್ಕಿಂತ ಹೀನಾಯ: ಡಿ.ಕೆ.ಶಿವಕುಮಾರ್

author img

By

Published : Oct 4, 2021, 10:24 PM IST

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದ ಅನ್ನದಾತನಲ್ಲಿ ಅನಾಥ ಪ್ರಜ್ಞೆ ಕಾಡುವಂತಾಗಿದೆ. ರೈತ ವಿರೋಧಿ ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುತ್ತಿರುವ ರೈತರ ಉಸಿರನ್ನೇ ಅಡಗಿಸಿದೆ ಎಂದು ಆರೋಪಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದನ್ನು ಖಂಡಿಸಿ ಸೋಮವಾರ ಪಂಜಿನ ಮೆರವಣಿಗೆ ನಡೆಸಿತು.

KPCC president DK shivakumar Hits out BJP
ಡಿ.ಕೆ.ಶಿವಕುಮಾರ್

ಬೆಂಗಳೂರು: ಪ್ರಿಯಾಂಕಾ ಗಾಂಧಿ ಕೇವಲ 4 ಜನರ ಜತೆ ತೆರಳಿದಾಗ ಎಳೆದಾಡಿ ಬಂಧಿಸಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ರೈತರ ಹತ್ಯೆ ಜಲಿಯನ್ ವಾಲಾಬಾಗ್ ನರಮೇಧಕ್ಕಿಂತ ಹೀನಾಯ ಕೃತ್ಯ. ಬಿಜೆಪಿ ಸರ್ಕಾರ ಬ್ರಿಟೀಷರಿಗಿಂತ ಹೀನಾಯವಾಗಿ ನಡೆದುಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಹತ್ಯೆ ಪ್ರಕರಣ: ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಇದೇ ಮೊದಲ ಬಾರಿಗೆ ದೇಶದ ಅನ್ನದಾತನಲ್ಲಿ ಅನಾಥ ಪ್ರಜ್ಞೆ ಕಾಡುವಂತಾಗಿದೆ. ರೈತ ವಿರೋಧಿ ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತುತ್ತಿರುವ ರೈತರ ಉಸಿರನ್ನೇ ಅಡಗಿಸಿದೆ ಎಂದು ಆರೋಪಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇದನ್ನು ಖಂಡಿಸಿ ಸೋಮವಾರ ಪಂಜಿನ ಮೆರವಣಿಗೆ ನಡೆಸಿತು.

ನಿನ್ನೆ ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಬೆಂಗಾವಲು ಕಾರು ಹರಿಸಿ ನಾಲ್ವರು ರೈತರನ್ನು ಹತ್ಯೆ ಮಾಡಿದ್ದನ್ನು ಹಾಗೂ ಹತ್ಯೆಗೊಳಗಾದ ರೈತರ ಕುಟುಂಬದವರಿಗೆ ಸಾಂತ್ವನ ಹೇಳಲು ತೆರಳಿದ ಉತ್ತರ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ಅವರ ಮೇಲೆ ಪೊಲೀಸರ ದೌರ್ಜನ್ಯ, ಕಾನೂನು ಬಾಹಿರ ಬಂಧನ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ಪಂಜಿನ ಮೆರವಣಿಗೆ ನಡೆಸಿದರು.

ಪಂಜಿನ ಮೆರವಣಿಗೆ

ಸೋಮವಾರ ಸಂಜೆ 6 ಗಂಟೆಗೆ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಬಾಳೆಕುಂದ್ರಿ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು, ರೈತ ವಿರೋಧಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ನಂತರ ರಾಜ್ಯಪಾಲರನ್ನು ಭೇಟಿ ಮಾಡಿ, ರೈತರ ಹತ್ಯೆ ಮಾಡಿರುವ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ರಾಜೀನಾಮೆ ಪಡೆದು, ಅವರನ್ನು ಬಂಧಿಸಬೇಕು.

ಕಾನೂನು ಬಾಹಿರವಾಗಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಿಡುಗಡೆ ಮಾಡಬೇಕು. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗುತ್ತಿರುವ ಪ್ರಜಾಪ್ರಭುತ್ವದ ಕಗ್ಗೊಲೆಯನ್ನು ತಪ್ಪಿಸಬೇಕು. ರೈತರ ಮರಣ ಶಾಸನವಾಗಿರುವ ಕೃಷಿ ಕರಾಳ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರಜಾಪ್ರಭುತ್ವಕ್ಕೆ ಬಿಜೆಪಿ ಮಾರಕ

ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದೇಶದಲ್ಲಿ ಸ್ವಾತಂತ್ರ್ಯಕ್ಕೆ ದೊಡ್ಡ ಅಪಮಾನವಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹುಟ್ಟಿರುವುದೇ ಹೋರಾಟದಿಂದ. ಹೋರಾಟ ನಮ್ಮ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.

ದೇಶದ ಅನ್ನದಾತ ಹೋರಾಟ ಮಾಡುವಾಗ ಅವರನ್ನು ಗೌರವಯುತವಾಗಿ ನೋಡಲಿಲ್ಲ. ಅವರ ಕಷ್ಟ ಆಲಿಸಲಿಲ್ಲ. ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಕುಟುಂಬ ಕಾರು ಹರಿಸಿ ಕೊಲೆ ಮಾಡಿರುವುದು, ಮಾನವ ಕುಲಕ್ಕೆ ಮಾಡಿರುವ ಅಪಮಾನ, ಅನ್ಯಾಯ ಮಾಡಿದಂತೆ ಎಂದು ಡಿಕೆಶಿ ಹರಿಹಾಯ್ದರು.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿತ್ತು

ಈ ಸಾವು ಯಾರಿಂದ, ಯಾವ ಕಾರಣಕ್ಕೆ ಆಗಿದೆ ಎಂಬುದು ಈಗಿನ ಪ್ರಶ್ನೆ. ರೈತರನ್ನು ಹತ್ಯೆ ಮಾಡಿದ ಮಂತ್ರಿ ಮಗನನ್ನು ಇದುವರೆಗೂ ಬಂಧಿಸಲು ಸಾಧ್ಯವಾಗಿಲ್ಲ ಎಂದರೆ ಇದು ಯಾವ ಆಡಳಿತ?, ಯಾವ ಪ್ರಜಾಪ್ರಭುತ್ವ? ಯಾವ ಕಾನೂನು?. ಇಷ್ಟು ಹೊತ್ತಿಗೆ ಉತ್ತರ ಪ್ರದೇಶದ ಸಿಎಂ ಹಾಗೂ ಡಿಸಿಎಂ, ಕೇಂದ್ರ ಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿತ್ತು. ಆದರೆ ಇದ್ಯಾವುದೂ ಆಗಿಲ್ಲ. ರಾಜೀನಾಮೆಯೂ ಇಲ್ಲ, ಬಂಧನವೂ ಇಲ್ಲ ಎಂದು ಕಿಡಿಕಾರಿದರು.

ನಮ್ಮ ರಾಷ್ಟ್ರೀಯ ನಾಯಕಿ, ಆ ರಾಜ್ಯದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ಅವರು ರೈತರಿಗೆ ಸಾಂತ್ವನ ಹೇಳಲು ಹೋದರೆ, ಅದು ನಮ್ಮ ಹಕ್ಕಲ್ಲವೇ? ಹೋರಾಟ ಪ್ರಜಾಪ್ರಭುತ್ವ ವ್ಯವಸ್ಥೆಯ ಒಂದು ಭಾಗವಲ್ಲವೇ? ಎಂದು ಡಿಕೆಶಿ ಪ್ರಶ್ನಿಸಿದರು.

ಜನ ಎಚ್ಚೆತ್ತುಕೊಳ್ಳಬೇಕು

ಕಾನೂನು ದುರುಪಯೋಗ ಆಗುತ್ತಿದ್ದು, ಜನ ಎಚ್ಚೆತ್ತುಕೊಳ್ಳಬೇಕು. ನಾವು ಹೋರಾಟ ಮಾಡುತ್ತಿದ್ದು, ನಾಳೆ, ನಾಡಿದ್ದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ, ಪ್ರಸ್ತಾವನೆ ಸಲ್ಲಿಸಬೇಕು. ಇದು ಕೇವಲ ಪಕ್ಷದ ವಿಚಾರವಲ್ಲ. ಪ್ರಜಾಪ್ರಭುತ್ವದ ಉಳಿವಿನ ವಿಚಾರ ಎಂದರು.

ಸಾಂತ್ವನ ಹೇಳುವುದು ಭಾರತೀಯ ಸಂಸ್ಕೃತಿಯ ಭಾಗವೋ ಅಲ್ಲವೋ ಎಂಬ ಪ್ರಶ್ನೆ ಈಗ ಮೂಡಿದೆ. ಯಾವುದೇ ಕಾನೂನಿನ ವಾರಂಟ್​ ಇಲ್ಲದೇ ನಮ್ಮ ನಾಯಕಿಯನ್ನು ಬಂಧಿಸಿದ್ದು, ಅದನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಗ್ರವಾಗಿ ಖಂಡಿಸುತ್ತದೆ ಎಂದು ಡಿಕೆಶಿ ಹೇಳಿದರು.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಇಡೀ ಕಾಂಗ್ರೆಸ್ ಪಕ್ಷ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ದೇಶದಾದ್ಯಂತ ರೈತರ ಪರವಾಗಿ ಹೋರಾಟ ಮಾಡುತ್ತದೆ. ರೈತರ ಧ್ವನಿಯಾಗಿ ನಾವೆಲ್ಲರೂ ನಿಲ್ಲುತ್ತೇವೆ ಎಂದು ಡಿಕೆಶಿ ಘೋಷಿಸಿದರು.

ಇದನ್ನೂ ಓದಿ: ರೈತರ ಹತ್ಯೆ, ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್​ ಪಕ್ಷದಿಂದ ಪಂಜಿನ ಮೆರವಣಿಗೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.