ETV Bharat / city

8.62 ಲಕ್ಷ ವಿಕಲಚೇತನರಿಗೆ ಆದ್ಯತೆ ಮೇರೆಗೆ ಲಸಿಕೆ: ಹೈಕೋರ್ಟ್​ಗೆ ಸರ್ಕಾರದ ಮಾಹಿತಿ - ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವ

ಕೋವಿಡ್ ನಿಯಂತ್ರಣಕ್ಕಾಗಿ ಲಾಕ್​​ಡೌನ್ ಜಾರಿ ಮಾಡಿದ ಬಳಿಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕ ವರ್ಗಗಳಿಗೆ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಕಾರ್ಮಿಕರಿಗೆ ಪಡಿತರ ನೀಡುವ ಸಲುವಾಗಿ ಜೂನ್ 14 ರಂದು 31.61 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

disabled-peoples-in-karnataka
ಹೈಕೋರ್ಟ್​ಗೆ ಸರ್ಕಾರದ ಮಾಹಿತಿ
author img

By

Published : Jun 17, 2021, 8:16 PM IST

ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಲಸಿಕಾ ಅಭಿಯಾನದಲ್ಲಿ, ನ್ಯಾಯಾಲಯದ ನಿರ್ದೇಶನದಂತೆ ವಿಕಲಚೇತನರಿಗೆ ಆದ್ಯತೆ ನೀಡಲಾಗಿದ್ದು, ಈವರೆಗೆ 8.62 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್​​​ಗೆ ಮಾಹಿತಿ ನೀಡಿದೆ. ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.

ಓದಿ: ಬ್ಲ್ಯಾಕ್​ ಫಂಗಸ್​ನಿಂದ ಗುಣಮುಖರಾದವರಗಿಂತ ಮೃತಪಟ್ಟವರೇ ಹೆಚ್ಚು.. ಸರ್ಕಾರದ ಮಾಹಿತಿ!

ಸರ್ಕಾರ ಸಲ್ಲಿಸಿರುವ ಲಿಖಿತ ಹೇಳಿಕೆಯಲ್ಲಿ ರಾಜ್ಯದಲ್ಲಿ 8,62,028 ವಿಕಲಚೇತರಿದ್ದಾರೆ. ಇವರಲ್ಲಿ 18 ವರ್ಷ ಮೇಲ್ಪಟ್ಟ 2,49,504 ವಿಕಲಚೇತನರಿಗೆ ಆದ್ಯತೆ ಮೇರೆಗೆ ಕೋವಿಡ್ ಲಸಿಕೆ ನೀಡಲಾಗಿದೆ. ಅದೇ ರೀತಿ ಸ್ಲಂ ನಿವಾಸಿಗಳಿಗೆ, ಕೋವಿಡ್ ವಾರಿಯರ್ಸ್ ಕುಟುಂಬಗಳಿಗೂ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾರ್ಮಿಕರಿಗೆ ಉಚಿತ ಪಡಿತರ, ಆರ್ಥಿಕ ನೆರವು:

ಕೋವಿಡ್ ನಿಯಂತ್ರಣಕ್ಕಾಗಿ ಲಾಕ್​​ಡೌನ್ ಜಾರಿ ಮಾಡಿದ ಬಳಿಕ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರ್ಮಿಕ ವರ್ಗಗಳಿಗೆ ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಕಾರ್ಮಿಕರಿಗೆ ಪಡಿತರ ನೀಡುವ ಸಲುವಾಗಿ ಜೂನ್ 14 ರಂದು 31.61 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಈ ಹಣದಲ್ಲಿ 3.8 ಲಕ್ಷ ವಲಸೆ ಕಾರ್ಮಿಕರ ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿ, ಒಂದು ಕೆಜಿ ಬೇಳೆ, ಎಣ್ಣೆ, ಉಪ್ಪು ಹಾಗೂ ಒಂದು ಪ್ಯಾಕೆಟ್ ಸಾಂಬರ್ ಪೌಡರ್ ಇರುವ 832 ರೂ. ಮೌಲ್ಯದ ಕಿಟ್ ವಿತರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಅಲ್ಲದೇ, ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯದಲ್ಲಿ 43 ಅಸಂಘಟಿತ ಕಾರ್ಮಿಕರ ವರ್ಗಗಳನ್ನು ಗುರುತಿಸಲಾಗಿದೆ. ಇಂತಹ 1,19,642 ಫಲಾನುಭವಿ ಕಾರ್ಮಿಕ ಕುಟುಂಬಗಳಿಗೆ ಒಂದು ಬಾರಿಯಂತೆ ತಲಾ 5 ಸಾವಿರ ನೆರವು ನೀಡಲಾಗಿದೆ ಎಂದು ಸರ್ಕಾರ ತನ್ನ ಲಿಖಿತ ಹೇಳಿಕೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.