ETV Bharat / city

ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ಆದ್ಯತಾ ಗುಂಪಿನ ಕೋಟಾದಲ್ಲಿ ವ್ಯಾಕ್ಸಿನ್​ - those who work snd study

ವಿದೇಶಕ್ಕೆ ಹೋಗಬೇಕಾದರೆ ಲಸಿಕೆ ಪಡೆಯಲೇಬೇಕು ಹಾಗೂ ಆ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಹಾಗೂ ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಈಗ ಸರ್ಕಾರ ಅವರ ಬೇಡಿಕೆಯನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವೀಶೀಲ್ಡ್ ಕೊಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ವ್ಯಾಕ್ಸಿನ್​
ವ್ಯಾಕ್ಸಿನ್​
author img

By

Published : May 31, 2021, 9:41 PM IST

ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಂಗ ಮಾಡುತ್ತಿರುವವರಿಗೆ ಆದ್ಯತಾ ಗುಂಪಿನ ಕೋಟಾದಲ್ಲಿ ನಾಳೆಯಿಂದ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುವುದು. ಅವಶ್ಯಕತೆ ಇದ್ದವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿವಂತೆ ಡಿಸಿಎಂ ತಿಳಿಸಿದರು.

ಸದ್ಯದ ಸಂದರ್ಭದಲ್ಲಿ ವಿದೇಶಕ್ಕೆ ಹೋಗಬೇಕಾದರೆ ಲಸಿಕೆ ಪಡೆಯಲೇಬೇಕು ಹಾಗೂ ಆ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಹಾಗೂ ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಈಗ ಸರ್ಕಾರ ಅವರ ಬೇಡಿಕೆಯನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವೀಶೀಲ್ಡ್ ಕೊಡಲಾಗುವುದು ಎಂದು ಡಿಸಿಎಂ ತಿಳಿಸಿದರು.

ಲಸಿಕೆ ಪಡೆಯಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯ. ಅಲ್ಲದೇ, ಸದ್ಯಕ್ಕೆ ಕೋವಿಶೀಲ್ಡ್ ಮೊದಲ ಡೋಸ್ ಪಡೆದವರ ಎರಡನೇ ಡೋಸ್ ಅಂತರವನ್ನು ಇವರ ಅನುಕೂಲಕ್ಕಾಗಿ 12 ವಾರಗಳಿಂದ ಒಂದು ತಿಂಗಳಕ್ಕೆ ಕುಗ್ಗಿಸಲಾಗಿದೆ. ಇದು ಇವರಿಗೆ ಮಾತ್ರ ಅನ್ವಯವಾಗುತ್ತದೆ ಮುಖ್ಯವಾಗಿ ವ್ಯಾಕ್ಸಿನ್ ನೀಡಿದ ಬಗ್ಗೆ ಇವರಿಗೆ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು. ಅದು ಎರಡನೇ ಡೋಸ್ ಪಡೆದಾಕ್ಷಣ ನೀಡಲಾಗುತ್ತದೆ ಎಂದು ಡಿಸಿಎಂ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.