ಬೆಂಗಳೂರು: ನೂರಾರು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದು ನಾಳೆ ಕರ್ನಾಟಕ ಬಂದ್ ಆಗೇ ಆಗುತ್ತೆ ಎಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್ ನಾಗಾರಾಜ್ ಹೇಳಿದರು.
ಎಂಇಎಸ್ ಕಾರ್ಯಕರ್ತರು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿದ್ದಾರೆ. ಅಷ್ಟೇ ಅಲ್ಲದೇ, ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ ಮಾಡಿದ್ದಾರೆ. ಹಾಗಾಗಿ, ಸರ್ಕಾರ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಇನ್ನು ಬಂದ್‌ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದ್ದಾರೆ. ಇದು ಕನ್ನಡಿಗರ ಸ್ವಾಭಿಮಾನದ ಬಂದ್. ಎಲ್ಲರೂ ಬಂದ್‌ಗೆ ಬೆಂಬಲ ಸೂಚಿಸಬೇಕು ಎಂದು ಮನವಿ ಮಾಡಿದರು.
ಕರವೇ ನಾರಾಯಣ ಗೌಡ ರಾಜಭವನ ಮತ್ತಿಗೆ ವಿಚಾರ:
ರಾಜಭವನ ಮುತ್ತಿಗೆ ಹಾಕಿರುವುದು ಒಳ್ಳೆಯ ಸಂಗತಿ. ಇದರಿಂದಾಗಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟುವ ಕೆಲಸ ಮಾಡ್ತಿದ್ದಾರೆ ಎಂದು ವಾಟಾಳ್ ಹೇಳಿದರು.