ಬೆಂಗಳೂರು: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿ ಕ್ಷೇತ್ರದಲ್ಲಿ 10 ಕಿಲೋಮೀಟರ್ಗೆ ಒಂದು ಸಂಚಾರಿ ಆಸ್ಪತ್ರೆ ತೆರೆಯಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಏಕಾಂಗಿ ಹೋರಾಟ ಮಾಡುತ್ತಾ, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ತೀವ್ರ ಕ್ರಮ ಕೈಗೊಳಬೇಕು. ಈ ಕೂಡಲೇ ಸರ್ಕಾರ ವಿಧಾನಸಭೆ ಆಧಿವೇಶನಗಳನ್ನು ನಿಲ್ಲಿಸಬೇಕು. ಶಾಸಕರುಗಳು ಅವರವರ ಕ್ಷೇತ್ರಕ್ಕೆ ತೆರಳಬೇಕು. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಮಿತಿ ರಚಿಸಬೇಕು ಎಂದರು.
ಬೆಂಗಳೂರಿನಲ್ಲಿ ಮೇಯರ್ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕಾರ್ಪೊರೇಟರ್ಗಳನ್ನು ಅವರವರ ಏರಿಯಾಗೆ ಕಳುಹಿಸಿ, ಕೊರೊನಾ ವೈರಸ್ ಬಗ್ಗೆ ಜಾಗೃತಿ ಮಾಡಿಸಬೇಕು. ಜೊತೆಗೆ ರಾಜ್ಯಾದ್ಯಂತ ಸರ್ಕಾರವೇ ಜನರಿಗೆ ಮಾಸ್ಕ್ ಅನ್ನು ಉಚಿತವಾಗಿ ನೀಡಬೇಕು. ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮಾಡುವ ಎಲ್ಲಾ ಕೆಲಸಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ವಾಟಾಳ್ ನಾಗರಾಜ್ ಹೇಳಿದರು.