ETV Bharat / city

ಕುಮಾರಕೃಪಾ ರಸ್ತೆ ಸುತ್ತಮುತ್ತ ವಾಹನ ಸಂಚಾರ ತಾತ್ಕಾಲಿಕ ಬಂದ್... ಯಾಕೆ ಅಂತೀರಾ? - ಬೆಂಗಳೂರು ಚಿತ್ರಸಂತೆ ಸುದ್ದಿ

ನಾಳೆ ಬೆಂಗಳೂರಿನ ಚಿತ್ರಕಲಾ ಪರಿಷತ್​ನಲ್ಲಿ ಚಿತ್ರಸಂತೆ ನಡೆಯಲಿದೆ. ಹೀಗಾಗಿ ಭಾನುವಾರ ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಈ ಭಾಗದ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

Chitra santhe
ಬೆಂಗಳೂರು ಚಿತ್ರಸಂತೆ
author img

By

Published : Jan 4, 2020, 10:08 PM IST

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್​ ವತಿಯಿಂದ ಗರದ ಕುಮಾರಕೃಪಾ ರಸ್ತೆಯಲ್ಲಿ 17ನೇ ಚಿತ್ರಸಂತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಈ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಹಾಗೂ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ದೇಶದ ನಾನಾ ಕಡೆಗಳಿಂದ ಕಲಾವಿದರುಗಳ ಕಲಾಕೃತಿಗಳನ್ನು ಚಿತ್ರಕಲಾ ಪರಿಷತ್ ಆವರಣ ಮತ್ತು ಕುಮಾರಕೃಪಾ ರಸ್ತೆಯ ಎರಡೂ ಬದಿಯ ಕಾಲು ಹಾದಿಯಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪರ್ಯಾಯ ಮಾರ್ಗಗಳನ್ನು ಮಾಡಲಾಗಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾರೆ.

ವಾಹನಗಳ ಮಾರ್ಗ ಬದಲಾವಣೆ

ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ಬರುವ ವಾಹನ ಸಂಚಾರವನ್ನು ರೇಸ್‌ವ್ಯೂ ಜಂಕ್ಷನ್ ಮೂಲಕ ಕೆಕೆ ರಸ್ತೆ ಪ್ರವೇಶಿಸುವುದನ್ನು ನಿರ್ಬಂಧಿಸಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್-ಬಸವೇಶ್ವರ ವೃತ್ತ-ಹಳೇ ಹೈಗ್ರೌಂಡ್ ಜಂಕ್ಷನ್-ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಮುಂದೆ ಸಾಗಬಹುದಾಗಿದೆ.

ಟಿ.ಚೌಡಯ್ಯ ರಸ್ತೆಯಿಂದ ಬಂದು ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಕೆಕೆ ರಸ್ತೆ ಪ್ರವೇಶಿಸುವ ವಾಹನಗಳನ್ನು ವಿಂಡ್ಸರ್ ಮ್ಯಾನರ್ ಬಳಿ ನಿರ್ಬಂಧಿಸಿದ್ದು, ಈ ವಾಹನಗಳು ಟಿ.ಚೌಡಯ್ಯ ರಸ್ತೆ-ಹಳೇ ಹೈಗ್ರೌಂಡ್ಸ್ ಜಂಕ್ಷನ್-ಎಲ್ಆರ್‌ಡಿಇ -ಬಸವೇಶ್ವರ ವೃತ್ತ, ರೇಸ್ ಕೋರ್ಸ್ ರಸ್ತೆ ಮೂಲಕ ಮುಂದೆ ಸಾಗಬಹುದಾಗಿದೆ.

ವಾಹನಗಳ ನಿಲುಗೆ ಸ್ಥಳ

ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ನಾಲ್ಕು ಚಕ್ರಗಳ ವಾಹನಗಳು, ಕ್ರೆಸೆಂಟ್ ರಸ್ತೆಯಲ್ಲಿ ಗುರುರಾಜ ಕಲ್ಯಾಣ ಮಂಟಪದಿಂದ ಹೋಟೆಲ್ ಜನಾರ್ದನವರೆಗೆ ರಸ್ತೆಯ ಪಶ್ಚಿಮಕ್ಕೆ ನಾಲ್ಕು ಚಕ್ರ ವಾಹನಗಳು ಹಾಗೂ ಸರ್ಕಾರಿ ವಸತಿ ಗೃಹ ಕ್ರೆಸೆಂಟ್ ರಸ್ತೆ ಇಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

ರೇಸ್ ಕೋರ್ಸ್ ರಸ್ತೆ, ಟ್ರಿ ಎಲೈಟ್ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೆ, ರಸ್ತೆಯ ಪೂರ್ವ ಭಾಗಗಕ್ಕೆ ನಾಲ್ಕು ಚಕ್ರವಾಹನಗಳು, ಸೇವಾದಳ ಶಾಲೆ ಆವರಣ, ಕ್ರೆಸೆಂಟ್ ಕ್ರಾಸ್ ರಸ್ತೆ, ನಾಲ್ಕು ಚಕ್ರದ ವಾಹನಗಳು ಹಾಗೂ ಬಿಡಿಎ ಆವರಣ ನಿಲುಗಡೆ ಸ್ಥಳದಲ್ಲಿ ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡಿ ಸಹಕರಿಸಬೇಕೆಂದು ತಿಳಿಸಿದ್ದಾರೆ.

ವಾಹನಗಳ ನಿಲುಗಡೆಗೆ ಕೆಕೆ ರಸ್ತೆಯ ಸುತ್ತಮುತ್ತ ಸ್ಥಳಾವಕಾಶ ಕೊರತೆ ಇರುವುದರಿಂದ ಕಾರ್ಯಕ್ರಮಕ್ಕೆ ಬರುವವರು ಸಾರ್ವಜನಿಕರಿಗೆ ಸಾರಿಗೆ ಸಂಪರ್ಕ ಬಳಸಲು ಮನವಿ ಮಾಡಿದ್ದಾರೆ.

Intro:Body: ಚಿತ್ರಕಲಾ ಪರಿಷತ್ ನಲ್ಲಿ ನಾಳೆ ಚಿತ್ರಸಂತೆ: ಕುಮಾರಕೃಪ ರಸ್ತೆ ಸುತ್ತಮುತ್ತಾ ತಾತ್ಕಾಲಿಕವಾಗಿ ವಾಹನ ಸಂಚಾರ ಬಂದ್

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ನಗರದ ಕುಮಾರಕೃಪ ರಸ್ತೆಯಲ್ಲಿ 17ನೇ ಚಿತ್ರಸಂತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಈ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಹಾಗೂ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ದೇಶದ ನಾನಾ ಕಡೆಗಳಿಂದ ಕಲಾವಿದರುಗಳ ಕಲಾಕೃತಿಗಳನ್ನು ಚಿತ್ರಕಲಾ ಪರಿಷತ್ ಆವರಣ ಮತ್ತು ಕುಮಾರಕೃಪ ರಸ್ತೆಯ ಎರಡೂ ಬದಿಯ ಕಾಲು ಹಾದಿಯಲ್ಲಿ ಪ್ರದರ್ಶನಕ್ಕೆ ಇಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಪ್ರೇಕ್ಷಕರಿಗೆ ಅನುಕೂಲ ಮಾಡಿಕೊಡುವ ದೃಷ್ಠಿಯಿಂದ ಪರ್ಯಾಯ ಮಾರ್ಗಗಳನ್ನು ಮಾಡಲಾಗಿದೆ ಎಂದು ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ತಿಳಿಸಿದ್ದಾಾರೆ.

ವಾಹನಗಳ ಮಾರ್ಗ ಬದಲಾವಣೆ

ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ಬರುವ ವಾಹನ ಸಂಚಾರವನ್ನು ರೇಸ್‌ವ್ಯೂ ಜಂಕ್ಷನ್ ಮೂಲಕ ಕೆಕೆ ರಸ್ತೆ ಪ್ರವೇಶಿಸುವುದನ್ನು ನಿರ್ಬಂಧಿಸಿದ್ದು, ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಟ್ರಿಲೈಟ್ ಜಂಕ್ಷನ್-ಬಸವೇಶ್ವರ ವೃತ್ತ-ಹಳೇ ಹೈಗ್ರೌಂಡ್ ಜಂಕ್ಷನ್-ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಮುಂದೆ ಸಾಗಬಹುದಾಗಿದೆ.
ಟಿ.ಚೌಡಯ್ಯ ರಸ್ತೆಯಿಂದ ಬಂದು ವಿಂಡ್ಸರ್ ಮ್ಯಾನರ್ ವೃತ್ತದ ಮೂಲಕ ಕೆಕೆ ರಸ್ತೆ ಪ್ರವೇಶಿಸುವ ವಾಹನಗಳನ್ನು ವಿಂಡ್ಸರ್ ಮ್ಯಾನರ್ ಬಳಿ ನಿರ್ಬಂಧಿಸಿದ್ದು,ಈ ವಾಹನಗಳು ಟಿ.ಚೌಡಯ್ಯ ರಸ್ತೆ-ಹಳೇ ಹೈಗ್ರೌಂಡ್ಸ್ ಜಂಕ್ಷನ್-ಎಲ್ಆರ್‌ಡಿಇ-ಬಸವೇಶ್ವರ ವೃತ್ತ, ರೇಸ್ ಕೋರ್ಸ್ ರಸ್ತೆ ಮೂಲಕ ಮುಂದೆ ಸಾಗಬಹುದಾಗಿದೆ.

ವಾಹನಗಳ ನಿಲುಗೆ ಸ್ಥಳ: ರೈಲ್ವೆಏ ಪ್ಯಾರಲಲ್ ರಸ್ತೆಯಲ್ಲಿ ನಾಲ್ಕು ಚಕ್ರಗಳ ವಾಹನಗಳು, ಕ್ರೆಸೆಂಟ್ ರಸ್ತೆಯಲ್ಲಿ ಗುರುರಾಜ ಕಲ್ಯಾಣ ಮಂಟಪದಿಂದ ಹೋಟೆಲ್ ಜನಾರ್ಧನಾ ವರೆಗೆ ರಸ್ತೆಯ ಪಶ್ಚಿಮಕ್ಕೆ, ನಾಲ್ಕು ಚಕ್ರ ವಾಹನಗಳು ಹಾಗೂ ಸರ್ಕಾರಿ ವಸತಿ ಗೃಹ ಕ್ರೆಸೆಂಟ್ ರಸ್ತೆ ಇಲ್ಲಿ ದ್ವಿಚಕ್ರ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
ರೇಸ್ ಕೋರ್ಸ್ ರಸ್ತೆ, ಟ್ರಿ ಎಲೈಟ್ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೆ, ರಸ್ತೆಯ ಪೂರ್ವ ಭಾಗಗಕ್ಕೆ ನಾಲ್ಕು ಚಕ್ರವಾಹನಗಳು, ಸೇವಾದಳ ಶಾಲೆ ಆವರಣ, ಕ್ರೆಸೆಂಟ್ ಕ್ರಾಸ್ ರಸ್ತೆ, ನಾಲ್ಕು ಚಕ್ರದ ವಾಹನಗಳು ಹಾಗೂ ಬಿಡಿಎ ಆವರಣ ನಿಲುಗಡೆ ಸ್ಥಳದಲ್ಲಿ ನಾಲ್ಕು ಚಕ್ರ ವಾಹನಗಳನ್ನು ನಿಲುಗಡೆ ಮಾಡಿ ಸಹಕರಿಸಬೇಕೆಂದು ತಿಳಿಸಿದ್ದಾರೆ.
ವಾಹನಗಳ ನಿಲುಗಡೆಗೆ ಕೆಕೆ ರಸ್ತೆಯ ಸುತ್ತಮುತ್ತ ಸ್ಥಳಾವಕಾಶ ಕೊರತೆ ಇರುವುದರಿಂದ ಕಾರ್ಯಕ್ರಮಕ್ಕೆ ಬರುವವರು ಸಾರ್ವಜನಿಕರಿಗೆ ಸಾರಿಗೆ ಸಂಪರ್ಕ ಬಳಸಲು  ಮನವಿ ಮಾಡಿದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.