ಬೆಂಗಳೂರು: ನಗರದಲ್ಲಿ ಪುಂಡರು ರಾತ್ರೋರಾತ್ರಿ ಕೋವಿಡ್ ಕರ್ಫ್ಯೂ ಮಧ್ಯೆಯೂ ಅಟ್ಟಹಾಸ ಮೆರೆದಿದ್ದಾರೆ. ಗಾಂಜಾ ನಶೆಯಲ್ಲಿದ್ದ ಇಬ್ಬರು ಪುಂಡರು ಮಾಸ್ಕ್ ಧರಿಸಿ ವಾಹನಗಳ ಗಾಜುಗಳನ್ನು ಪುಡಿ ಮಾಡಿ ಪರಾರಿಯಾಗಿರುವ ಘಟನೆ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ.
ರಸ್ತೆ ಬದಿ ಸಾಲಾಗಿ ನಿಲ್ಲಿಸಿದ್ದ ಐದಕ್ಕೂ ಹೆಚ್ಚು ವಾಹನಗಳ ಗ್ಲಾಸ್ ಪುಡಿ ಪುಡಿ ಮಾಡಿದ್ದಾರೆ. ಏರಿಯಾದಲ್ಲಿದ್ದ ಸಿಸಿಟಿವಿಯಲ್ಲಿ ಪುಂಡರ ದುಷ್ಕೃತ್ಯ ಸೆರೆಯಾಗಿದೆ.
ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಅಶೋಕ ನಗರ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಅಶೋಕನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕರ್ಫ್ಯೂ ನಿಯಮ ಉಲ್ಲಂಘಿಸಿ ಶ್ವಾನದ ಅದ್ದೂರಿ ಹುಟ್ಟುಹಬ್ಬ : ಅಹಮದಾಬಾದ್ನಲ್ಲಿ ಮೂವರ ಬಂಧನ