ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಇಂದು ಸಂಜೆ 5.30 ರ ಸುಮಾರಿಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮೂರು ದಿನಗಳ ಭೇಟಿಗಾಗಿ ನಗರಕ್ಕೆ ಆಗಮಿಸಿದ ವೆಂಕಯ್ಯ ನಾಯ್ಡು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಂಸದರಾದ ಪಿ.ಸಿ.ಮೋಹನ್ ಆತ್ಮೀಯವಾಗಿ ಬರಮಾಡಿಕೊಂಡರು.
ನಾಳೆ ನಗರದ ಮೌಂಟ್ ಕಾರ್ಮೆಲ್ ಕಾಲೇಜಿನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಭಾಗಿಯಾಗಲಿದ್ದಾರೆ. ಉಪ ರಾಷ್ಟ್ರಪತಿ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಅವರ ಕಡೆಯ ಅಧಿಕೃತ ರಾಜ್ಯ ಪ್ರವಾಸ ಆಗಲಿದೆ.
(ಇದನ್ನೂ ಓದಿ: ಪರಿಸರ ರಾಯಭಾರಿಯಾಗಿ ಸಾಲು ಮರದ ತಿಮ್ಮಕ್ಕ ಆಯ್ಕೆ: ರಾಜ್ಯ ಸಚಿವ ಸಂಪುಟ ಸ್ಥಾನಮಾನ ನೀಡಿ ಆದೇಶ)