ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣಾ ಉಸ್ತುವಾರಿಗಳ ತಂಡದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಸೇರಿಸಿಕೊಳ್ಳದೇ ಇರುವುದಕ್ಕೆ ವಿಜಯೇಂದ್ರ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅಂತೆಯೇ ಹಾನಗಲ್ ಕ್ಷೇತ್ರದ ಬಿಜೆಪಿ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಅವರಿಗೆ ಪಕ್ಷ ಸ್ಥಾನ ಕಲ್ಪಿಸಿದೆ.
ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಕೋರ್ ಕಮಿಟಿ ಸಭೆ ನಿರ್ಧಾರದಂತೆ ಉಸ್ತುವಾರಿಗಳ ತಂಡವನ್ನು ರಚಿಸಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಈ ಹಿಂದೆ ನಡೆದ ಉಪ ಚುನಾವಣೆಗಳಲ್ಲಿ ಗಣನೀಯ ಸಾಧನೆ ಮಾಡಿ ಪಕ್ಷ ಸಂಘಟಿಸಿ ಸಾಮರ್ಥ್ಯ ಸಾಬೀತುಪಡಿಸಿರುವ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹೆಸರು ಉಸ್ತುವಾರಿಗಳ ಪಟ್ಟಿಯಲ್ಲಿ ಇರಲಿಲ್ಲ.
![ಹಾನಗಲ್ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರಗೆ ಸ್ಥಾನ](https://etvbharatimages.akamaized.net/etvbharat/prod-images/kn-bng-03-by-vijayendra-election-incharge-script-7208080_04102021170551_0410f_1633347351_993.jpg)