ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಗಳಾಗಲಿದ್ದಾರೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.
ಮಾಜಿ ವಿಧಾನಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಟಿ.ಎ. ಶರವಣ ನಿವಾಸಕ್ಕೆ ಇಂದು ಭೇಟಿ ನೀಡಿದ್ದ ವೇಳೆ ಕುಮಾರಸ್ವಾಮಿ ಅವರಿಗೆ ಗುರೂಜಿ ಭವಿಷ್ಯ ಹೇಳಿದ್ದಾರೆ. ನಿಮಗೆ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯುವ ಯೋಗವಿದೆ, 2022 ಜನವರಿ ನಂತರ ಎಲ್ಲವೂ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.
ನಿಖಿಲ್ಗೆ ಗಂಡು ಮಗುವಿನ ಯೋಗ:
ರಾಜ್ಯದಲ್ಲಿ ಜೆಡಿಎಸ್ಗೆ ಒಳ್ಳೆಯ ಕಾಲ ಬರಲಿದೆ. ಜೊತೆಗೆ ನಿಖಿಲ್ ಕುಮಾರಸ್ವಾಮಿಗೆ ಉತ್ತಮ ಭವಿಷ್ಯವಿದೆ. ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಶಾಸಕರಾಗುತ್ತಾರೆ. ನಿಖಿಲ್ ಅವರಿಗೆ ಗಂಡು ಮಗುವಿನ ಯೋಗವಿದೆ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ. ವಿನಯ್ ಗುರೂಜಿ ಮಾತು ಕೇಳಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಖುಷಿಯಾಗಿದ್ದಾರೆ.
ಟಿ.ಎ. ಶರವಣ ನಿವಾಸದಲ್ಲಿ ಕುಮಾರಸ್ವಾಮಿ, ವಿನಯ್ ಗುರೂಜಿ ಹಾಗೂ ಶರವಣ ಕುಟುಂಬದವರು ಭೋಜನ ಸೇವಿಸಿದ್ದಾರೆ. ಜೊತೆಗೆ ರಾಜ್ಯ ಹಾಗೂ ರಾಜಕೀಯದ ಬಗ್ಗೆ ಹಲವಾರು ವಿಷಯಗಳನ್ನು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.