ಬೆಂಗಳೂರು: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಯುವ ಬ್ರಿಗೇಡ್‌ನ ನಾಯಕ ನರೇಶ್ ಶೈಣೆ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದ ಮಾಡಿದ ವಕೀಲರು ಪ್ರಕರಣದಲ್ಲಿ ನರೇಶ್ ಅವರ ಪಾತ್ರವಿಲ್ಲ, ವಿನಾ ಕಾರಣ ಬಂಧಿಸಲಾಗಿದೆ. ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಬೇಕೆಂದು ಮನವಿ ಮಾಡಿದರು.
ನ್ಯಾಯಪೀಠವು ವಕೀಲರ ವಾದ ವಿವಾದ ಆಲಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ:
ಮಂಗಳೂರಿನಲ್ಲಿ ವಿನಾಯಕ ಬಾಳಿಗಾ ಅವರನ್ನು ಮನೆಯ ಮುಂದೆಯೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಯುವ ಬ್ರಿಗೇಡ್‌ನ ನಾಯಕ ನರೇಶ್ ಶೈಣೆ ಸೇರಿ ಇನ್ನಿತರರನ್ನು ಬಂಧಿಸಿದ್ದರು.