ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಕೋಟಿ ರೂಪಾಯಿ ದೇಣಿಗೆ ನೀಡಿದರು.
ಈ ವೇಳೆ ಶಾಸಕರಾದ ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಮತ್ತು ಧರ್ಮಸ್ಥಳದ ಡಿ.ಸುರೇಂದ್ರಕುಮಾರ್ ಅವರು ಉಪಸ್ಥಿತರಿದ್ದರು. ದಾವಣಗೆರೆ ಶಾಸಕ ಹಾಗೂ ಬಾಪೂಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ವೈಯಕ್ತಿಕ ದೇಣಿಗೆ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯ ದೇಣಿಗೆ 44 ಲಕ್ಷ ರೂ. ಗಳ ಚೆಕ್ಗಳನ್ನು ಹಸ್ತಾಂತರಿಸಿದರು.
ಇದೇ ವೇಳೆ ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಸತೀಶ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿದರು. ಈ ಸಂದರ್ಭದಲ್ಲಿ ನಂದಿನಿ ಬ್ರಾಂಡ್ನ ವಿವಿಧ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಯಿತು.