ETV Bharat / city

ಬಂದ ಹಣ ಯಾಕೆ ಉಪಯೋಗಿಸ್ತಿಲ್ಲ.. ಅಧಿಕಾರಿಗಳ ಮೇಲೆ ಗರಂ ಆದ ಸಿಎಂ.. Warning - ನಲ್ಲಿ ನೀರಿನ ಸಂಪರ್ಕ

ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿ ನಿಗದಿತ ಕಾಲಮಿತಿಯಲ್ಲಿ ಸಾಧಿಸುವಂತೆ ಸಿಎಂ ನಿರ್ದೇಶನ ನೀಡಿದರು.

bsy
bsy
author img

By

Published : Jun 22, 2021, 6:58 PM IST

ಬೆಂಗಳೂರು: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿವ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿ ನಿಗದಿತ ಕಾಲಮಿತಿಯಲ್ಲಿ ಸಾಧಿಸುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಈವರೆಗೆ 435 ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿದ್ದು, 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, 2021- 22ನೇ ಸಾಲಿನಲ್ಲಿ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಅನುಷ್ಠಾನಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಯೋಜನೆ ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಿ. ಈ ಕುರಿತು ಎಲ್ಲ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಿಎಂ ಗರಂ:

ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ. ಯೋಜನೆಗೆ ಬಂದಿರುವ ಕೇಂದ್ರ ಸರ್ಕಾರದ ಅನುದಾನ ವಾಪಸ್ ಹೋಗುತ್ತಿದೆ. ನೀವು ಏನು ಮಾಡ್ತಾ ಇದ್ದೀರಿ, ಬೇರೆ ಇಲಾಖೆಗಳ ಹಣ ಕಡಿತ ಮಾಡಿ ನಿಮಗೆ ಕೊಡ್ತಾ ಇದ್ದೇವೆ, ಕೆಲಸ ಏನು ಮಾಡುತ್ತಿದ್ದೀರಿ ಎಂದು ಅಧಿಕಾರಿಗಳ ಮೇಲೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಸಿಎಂ ಸಿಟ್ಟಾದ ವೇಳೆ ಸಮಜಾಯಿಷಿ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕೆಲವು ಜಿಲ್ಲೆಗಳಲ್ಲಿ ನೀರಿನ ಮೂಲಗಳೇ ಇಲ್ಲ, ಇನ್ನು ಕೆಲವು ಜಿಲ್ಲೆಗಳಲ್ಲಿ ವರ್ಷದ ಆರು ತಿಂಗಳು ಮಾತ್ರ ನೀರಿನ ಮೂಲಗಳು ಲಭ್ಯ ಇರುತ್ತವೆ, ಟಾರ್ಗೆಟ್ ಜಾಸ್ತಿ ಇದೆ, ಅನುಷ್ಠಾನದ ಸಮಯ ಕಡಿಮೆ ಎಂದು ಸಿಎಂ ಯಡಿಯೂರಪ್ಪ ಅವರನ್ನು ಸಮಾಧಾನ ಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.