ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಸ್ವಲ್ಪ ಮಟ್ಟಿಗೆ ಆಶಾದಾಯಕವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಬುಧವಾರವಷ್ಟೇ ರಾಜ್ಯ ರಾಜಧಾನಿ ಸೇರಿ ಹಲವೆಡೆ ಮಳೆಯಾಗಿದೆ.
ಮಲೆನಾಡು ಭಾಗದಲ್ಲೂ ಸ್ವಲ್ಪ ಮಟ್ಟಿಗೆ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೆಲ ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ. ಚಾಮರಾಜನಗರ, ಹಾಸನ ಭಾಗದಲ್ಲಿಯೂ ವರ್ಷಧಾರೆಯಾಗಿದೆ.
![reservoirs water level](https://etvbharatimages.akamaized.net/etvbharat/prod-images/7760725_thumbna.jpg)
ಆದರೆ ಕರ್ನಾಟಕದ ಉತ್ತರ ಭಾಗದಲ್ಲಿ ಮಳೆಯಾಗದೇ ಹಲವು ಬೆಳೆಗಳು ನೀರಿಲ್ಲದೇ ಸೊರಗಿವೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.