ಬೆಂಗಳೂರು: ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂಬ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರಕ್ಕೆ ನಮ್ಮ ಸಹಮತ ಇದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಸೂಚನೆಯಂತೆ ನಿರ್ಧಾರಗಳನ್ನು ಕೈಗೊಳ್ಳುತ್ತೇವೆ. ಈವರೆಗೂ ವರಿಷ್ಠರಿಂದ ಯಾವುದೇ ಸಂದೇಶ ಬಂದಿಲ್ಲ. ಜುಲೈ 26ರಂದು ಯಡಿಯೂರಪ್ಪನವರು ಹೇಳಿದ ಹಾಗೆ ಕೇಂದ್ರದ ನಾಯಕರ ಜೊತೆ ಚರ್ಚಿಸುತ್ತಾರೆ ಎಂದರು.
ಇದನ್ನೂ ಓದಿ: ರಾಜೀನಾಮೆ ಸುಳಿವು ನೀಡಿದ್ರಾ ಬಿಎಸ್ವೈ..? ಜು26ರ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ಕಾರ್ಯ ಎಂದ ಸಿಎಂ
ಕೇಂದ್ರ ಏನೇ ಹೇಳಿದರೂ ಬಿಎಸ್ವೈ ಹಾಗೂ ನಾವು ತಲೆಬಾಗುತ್ತೇವೆ. ಸಿಎಂ ಬದಲಾವಣೆಯಿಂದ ನಿಮಗೆ ಬೇಸರ ಆಗುತ್ತಿದೆಯಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವ ಅಶೋಕ್, ಬಿಜೆಪಿ ಸರ್ಕಾರಕ್ಕೆ ಎರಡು ವರ್ಷದ ತುಂಬಿದ ಸಂಭ್ರಮದಲ್ಲಿದ್ದೇನೆ ಎಂದಷ್ಟೇ ಹೇಳಿದರು.