ETV Bharat / city

ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ : ಸಂಸದ ಡಿ ಕೆ ಸುರೇಶ್ ವಿಶ್ವಾಸ - ಕಾಂಗ್ರೆಸ್‌ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತದೆ

ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿದೆ. ಗ್ರಾಮಗಳ ಅಭಿವೃದ್ಧಿ ಕುಂಠಿತ ಆಗಿದೆ. ಹಾಗಾಗಿ, ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸಿಗಲಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ..

we will win more mlc seats in council election - dk suresh in bangalore
ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ :ಸಂಸದ ಡಿಕೆ ಸುರೇಶ್ ವಿಶ್ವಾಸ
author img

By

Published : Dec 4, 2021, 1:40 PM IST

ಬೆಂಗಳೂರು : ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ 20 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಹೆಚ್ಚಿನ ಸ್ಥಾನ ಗೆಲ್ಲುವ ನಿರೀಕ್ಷೆ ಹೊಂದಿದ್ದೇವೆ. ರಾಜ್ಯ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿಲ್ಲ.

ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಿಜೆಪಿ ಹಾಳು ಮಾಡುತ್ತಿದೆ. ಗ್ರಾಮಗಳ ಅಭಿವೃದ್ಧಿ ಕುಂಠಿತ ಆಗಿದೆ. ಹಾಗಾಗಿ, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸಿಗಲಿದೆ ಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ.

ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿರುವ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜೀವನ ಚರಿತ್ರೆ ಆಧಾರಿತ ಛಾಯಾಚಿತ್ರ ಪ್ರದರ್ಶನವನ್ನು ಡಿ.ಕೆ.ಸುರೇಶ್‌ ವೀಕ್ಷಿಸಿದರು.

ಬಳಿಕ ಜೆಡಿಎಸ್, ಬಿಜೆಪಿ ಒಳ ಒಪ್ಪಂದ ವಿಚಾರ ಮಾತನಾಡಿ, ಜೆಡಿಎಸ್ ರಾಜಕೀಯ ಕುತಂತ್ರಗಳನ್ನು ಮಾಡ್ತಿದೆ. ಅದಕ್ಕೆ ತಕ್ಕ ಉತ್ತರವನ್ನು ಮೇಲ್ಮನೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೀಡಲಿದೆ ಎಂದರು.

ವೈಯುಕ್ತಿಕ ಟೀಕೆಯ ಬಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ಕೆಜಿಎಫ್‌ ಬಾಬು ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಬಿಜೆಪಿಯ 1 ಡಜನ್ ಮಂತ್ರಿಗಳು ಕೋರ್ಟ್‌ನಿಂದ ಸ್ಟೇ ತಂದಿದ್ದಾರೆ. ಯಾಕೆ ಕೋರ್ಟ್‌ಗೆ ಹೋಗಿ ಸ್ಟೇ ತಂದಿದ್ದಾರೆ. ಅವರೆಲ್ಲರೂ ಯಾಕೆ ಸ್ಟೇ ತಂದ್ರು ನೀವೇ ಕೇಳಿ? ಬಾಬು ಅವರು ಕೋರ್ಟ್‌ಗೆ ಹೋಗಿ ಸ್ಟೇ ತಂದಿಲ್ಲ ಎಂದು ವಿವರಿಸಿದರು.

ನ.30ರಂದು ಆರಂಭವಾಗಿರುವ ಛಾಯಾಚಿತ್ರ ಪ್ರದರ್ಶನ ಡಿಸೆಂಬರ್ 5ರವರೆಗೂ ನಡೆಯಲಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್ ವಿಶೇಷ ಕಾಳಜಿ ವಹಿಸಿ ಈ ಪ್ರದರ್ಶನ ಆಯೋಜಿಸಿದ್ದಾರೆ ಎಂದರು.

ಇದನ್ನೂ ಓದಿ: ವಿಧಾನ ಪರಿಷತ್ ಕದನ: ಗ್ರಾಮ ಪಂಚಾಯತ್ ಸದಸ್ಯರೇ ನಿರ್ಣಾಯಕರು..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.